6ನೇ ತರಗತಿಯ ಪ್ರವೇಶ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕೊಪ್ಪಳ , 20 ಫೆಬ್ರವರಿ (ಹಿ.ಸ.); ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2026-27ನೇ ಸಾಲಿಗಾಗಿ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಸ
6ನೇ ತರಗತಿಯ ಪ್ರವೇಶ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


ಕೊಪ್ಪಳ , 20 ಫೆಬ್ರವರಿ (ಹಿ.ಸ.);

ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2026-27ನೇ ಸಾಲಿಗಾಗಿ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ಫೆ.28 ರವರೆಗೆ ವಿಸ್ತರಿಸಲಾಗಿದೆ.

ಪೋಷಕರು, ವಿದ್ಯಾರ್ಥಿಗಳು ಆನ್‍ಲೈನ್ ಮುಖಾಂತರ ಸೇವಾಸಿಂಧು ಪೋರ್ಟಲ್‍ನಲ್ಲಿ https://sevasindhuservices.karnataka.gov.in ಅಥವಾ dom.karnataka.gov.in/koppal/public ನಲ್ಲಿ ನೇರವಾಗಿ ಅರ್ಜಿಗಳನ್ನು ಹತ್ತಿರದ ವಸತಿ ಶಾಲೆ, ಮಾಹಿತಿ ಕೇಂದ್ರ ಕಛೇರಿಗಳಲ್ಲಿ ಎಲ್ಲಾ ದಾಖಲೆಗಳೊಂದಿಗೆ ಭೇಟಿ ನೀಡಿ ಕೊನೆಯ ದಿನಾಂಕದೊಳಗಾಗಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಕುಕನೂರು, ತಳಕಲ್, ಕುದರಿಮೋತಿ, ಟಣಕನಕಲ್, ಹಿರೇಬೆಣಕಲ್-1, ಹಿರೇಬೆಣಕಲ್-2, ಹಿರೇಬನ್ನಿಗೋಳ (ಕುಷ್ಟಗಿ), ಹಿಟ್ನಾಳ, ಮುಧೋಳ, ಹುಲಿಹೈದರ್‍ದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಲಿಂಗದಳ್ಳಿಯ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಯಲಬುರ್ಗಾ, ಕುಷ್ಟಗಿ ಮತ್ತು ಗಂಗಾವತಿ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಅಥವಾ ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ ದೂ.ಸಂ: 08539-225070, 8088892549, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಗಂಗಾವತಿ ಮೊ.ಸಂ: 9972524670. ಕುಷ್ಟಗಿ ಮೊ.ಸಂ: 8861610578 ಹಾಗೂ ಯಲಬುರ್ಗಾ ಮೊ.ಸಂ: 9620522537ಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande