ನ್ಯಾಯಾಲಯಕ್ಕೆ ಹಾಜರಾದ ರಾಹುಲ್ ಗಾಂಧಿ
ಸುಲ್ತಾನ್‌ಪುರ, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಉತ್ತರಪ್ರದೇಶದ ಸುಲ್ತಾನಪುರ್ ಸ್ಥಳೀಯ ಸಂಸದ/ಶಾಸಕ ನ್ಯಾಯಾಲಯದಲ್ಲಿ ತಮ
Rahul Gandhi


ಸುಲ್ತಾನ್‌ಪುರ, 20 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಉತ್ತರಪ್ರದೇಶದ ಸುಲ್ತಾನಪುರ್ ಸ್ಥಳೀಯ ಸಂಸದ/ಶಾಸಕ ನ್ಯಾಯಾಲಯದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಿದರು.

ಲೋಕಸಭೆಯ ಪ್ರತಿಪಕ್ಷದ ನಾಯಕ ಹಾಗೂ ರಾಯ್‌ಬರೇಲಿ ಸಂಸದರಾಗಿರುವ ರಾಹುಲ್ ಗಾಂಧಿ ಬೆಳಿಗ್ಗೆ ಸುಮಾರು 9:30ಕ್ಕೆ ಲಕ್ನೋ ವಿಮಾನ ನಿಲ್ದಾಣ ತಲುಪಿ, ಅಲ್ಲಿಂದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಮೂಲಕ 10:50ರ ಸುಮಾರಿಗೆ ನ್ಯಾಯಾಲಯಕ್ಕೆ ಆಗಮಿಸಿದರು. ಅವರು ಭಾರತೀಯ ದಂಡ ಸಂಹಿತೆಯ 313ನೇ ವಿಧಿಯಡಿ ತಮ್ಮ ಹೇಳಿಕೆಯನ್ನು ದಾಖಲಿಸಿದರು. “ಅಗ್ಗದ ಜನಪ್ರಿಯತೆಗಾಗಿ ನನ್ನ ವಿರುದ್ಧ ಪಿತೂರಿಯಿಂದ ಪ್ರಕರಣ ದಾಖಲಿಸಲಾಗಿದೆ,” ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು. ಸುಮಾರು 20 ನಿಮಿಷಗಳ ಕಾಲ ಅವರು ನ್ಯಾಯಾಲಯದಲ್ಲಿ ಹಾಜರಿದ್ದರು.

ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಮಾರ್ಚ್ 9ಕ್ಕೆ ನಿಗದಿಪಡಿಸಿದೆ. ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಜಯ್ ರೈ ಮತ್ತು ಹಿರಿಯ ನಾಯಕ ಪ್ರಮೋದ್ ತಿವಾರಿ ಅವರೊಂದಿಗೆ ಹಾಜರಿದ್ದರು.

ಪ್ರಕರಣದ ಹಿನ್ನೆಲೆ

ಕೊತ್ವಾಲಿ ದೇಹತ್‌ನ ಹನುಮಾನ್‌ಗಂಜ್ ನಿವಾಸಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು 2018ರ ಅಕ್ಟೋಬರ್‌ನಲ್ಲಿ ಈ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು. 2018ರ ಆಗಸ್ಟ್‌ನಲ್ಲಿ ಕರ್ನಾಟಕ ಚುನಾವಣಾ ಪ್ರಚಾರದ ವೇಳೆ ಆಗಿನ ಬಿಜೆಪಿ ಅಧ್ಯಕ್ಷರಾಗಿದ್ದ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದರು.

ಈ ಪ್ರಕರಣದ ವಿಚಾರಣೆ ಕಳೆದ ಐದು ವರ್ಷಗಳಿಂದ ಮುಂದುವರಿದಿದೆ. ರಾಹುಲ್ ಗಾಂಧಿ ಹಾಜರಾಗದ ಹಿನ್ನೆಲೆಯಲ್ಲಿ ಡಿಸೆಂಬರ್ 2023ರಲ್ಲಿ ನ್ಯಾಯಾಲಯವು ಅವರ ವಿರುದ್ಧ ವಾರಂಟ್ ಜಾರಿಗೊಳಿಸಿತ್ತು. ಬಳಿಕ ಫೆಬ್ರವರಿ 20, 2024ರಂದು ಅವರು ನ್ಯಾಯಾಲಯದಲ್ಲಿ ಶರಣಾಗಿ, ವಿಶೇಷ ಮ್ಯಾಜಿಸ್ಟ್ರೇಟ್ ಅವರಿಂದ ತಲಾ 25,000 ರೂಪಾಯಿಗಳ ಎರಡು ಶ್ಯೂರಿಟಿಗಳ ಮೇಲೆ ಜಾಮೀನು ಪಡೆದಿದ್ದರು.

ವಾದಿ ಪರ ವಕೀಲ ಸಂತೋಷ್ ಪಾಂಡೆ ಅವರ ಪ್ರಕಾರ, ಸಾಕ್ಷಿ ರಾಮ್ ಚಂದ್ರ ದುಬೆ ಅವರನ್ನು ಜನವರಿ 6ರಂದು ಹಾಜರುಪಡಿಸಲಾಗಿದ್ದು, ಪ್ರತಿವಾದಿ ಪರ ವಕೀಲರು ಅಡ್ಡಪರೀಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಇದೀಗ 313ರ ಹೇಳಿಕೆ ದಾಖಲಿಸುವ ಹಂತಕ್ಕೆ ಪ್ರಕರಣ ಬಂದಿದ್ದು, ಮುಂದಿನ ವಿಚಾರಣೆ ಮಾರ್ಚ್ 9ರಂದು ನಡೆಯಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande