ಲಂಚ ಪಡೆಯುತ್ತಿದ್ದ ವೇಳೆ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ
ಗದಗ, 21 ಫೆಬ್ರವರಿ (ಹಿ.ಸ.): ಆ್ಯಂಕರ್: ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗದಗ ತಾಲೂಕಿನ ಚಿಂಚಲಿ ಗ್ರಾಮದ ಗುತ್ತಿಗೆದಾರ ವಿಜಯರಾಜ
Chandru lamani


ಗದಗ, 21 ಫೆಬ್ರವರಿ (ಹಿ.ಸ.):

ಆ್ಯಂಕರ್:

ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಗದಗ ತಾಲೂಕಿನ ಚಿಂಚಲಿ ಗ್ರಾಮದ ಗುತ್ತಿಗೆದಾರ ವಿಜಯರಾಜ ಎಸ್. ಪೂಜಾರ ನೀಡಿದ ದೂರಿನ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆದಿದೆ. ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗಳ ಸಂಬಂಧ ಒಟ್ಟು 11 ಲಕ್ಷ ರೂ. ಲಂಚಕ್ಕೆ ಒತ್ತಾಯಿಸಿ, ಮೊದಲ ಹಂತವಾಗಿ 5 ಲಕ್ಷ ರೂ. ಸ್ವೀಕರಿಸುವ ವೇಳೆ ದಾಳಿ ನಡೆದಿದೆ.

ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಶಾಸಕರಿಗೆ ಸೇರಿದ ಬಾಲಾಜಿ ಆಸ್ಪತ್ರೆಯಲ್ಲಿ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸ್ಥಳದಲ್ಲಿ 4.5 ಲಕ್ಷ ರೂ. ಪತ್ತೆಯಾಗಿದ್ದು, 50 ಸಾವಿರ ರೂ. ಹಣವನ್ನು ಹೊರಗೆ ಎಸೆಯಲು ಯತ್ನಿಸಿದ ಆರೋಪವೂ ಕೇಳಿಬಂದಿದೆ. ಆ ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣದಲ್ಲಿ ಶಾಸಕರ ಆಪ್ತ ಸಹಾಯಕರಾದ ಮಂಜುನಾಥ ವಾಲ್ಮೀಕಿ ಹಾಗೂ ಗುರು ಲಮಾಣಿ ಅವರನ್ನು ಸಹ ವಿಚಾರಣೆಗೆ ಒಳಪಡಿಸಿ ವಶಕ್ಕೆ ಪಡೆಯಲಾಗಿದೆ.

ಲೋಕಾಯುಕ್ತ ದಾಳಿ ಸುದ್ದಿಯ ಬಳಿಕ ನೂರಾರು ಬಿಜೆಪಿ ಕಾರ್ಯಕರ್ತರು ಆಸ್ಪತ್ರೆ ಎದುರು ಜಮಾಯಿಸಿ ದಾಳಿ ರಾಜಕೀಯ ಕುತಂತ್ರವೆಂದು ಆರೋಪಿಸಿ ಸಚಿವ ಎಚ್ ಕೆ ಪಾಟೀಲ್ ವಿರುದ್ಧ ಧಿಕ್ಕಾರ ಹಾಕಿದ್ದಾರೆ. ಈ ವೇಳೆ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದವೂ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ.

ಶಾಸಕರ ಬಂಧನಕ್ಕೆ ಲೋಕಾಯುಕ್ತ ಅಧಿಕಾರಿಗಳು ಅಗತ್ಯ ಕಾನೂನು ಪ್ರಕ್ರಿಯೆ ನಡೆಸಿದ್ದು ಇದುವರೆಗೂ ಅಧಿಕೃತ ಪ್ರಕಟಣೆ ನೀಡಿಲ್ಲ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande