ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ನ್ಯಾಯಾಂಗ ಬಂಧನಕ್ಕೆ
ಬೆಂಗಳೂರು, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : 1 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗೆ ಸಂಬಂಧಿಸಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಆಪ್ತ ಸಹಾಯಕರಿಗೆ ಮಾರ್ಚ ೩ರವರೆಗೆ ನ್ಯಾಯಾಂಗ ಬಂಧನಕ
Chandru


ಬೆಂಗಳೂರು, 22 ಫೆಬ್ರವರಿ (ಹಿ.ಸ.) :

ಆ್ಯಂಕರ್ : 1 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗೆ ಸಂಬಂಧಿಸಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಆಪ್ತ ಸಹಾಯಕರಿಗೆ ಮಾರ್ಚ ೩ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಗುತ್ತಿಗೆದಾರನೊಬ್ಬ ನೀಡಿದ ದೂರಿನ ಆಧಾರದಲ್ಲಿ ಗದಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು, 5 ಲಕ್ಷ ರೂ. ಸ್ವೀಕರಿಸುವ ಸಂದರ್ಭದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದರು.

ಬಂಧನದ ಬಳಿಕ ಆರೋಪಿಗಳನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಧೀಶರ ನಿವಾಸಕ್ಕೆ ಕರೆತಂದು ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ ಗಜಾನನ್ ಭಟ್ಟ್ ಶಾಸಕ ಸೇರಿದಂತೆ ಇಬ್ಬರು ಆಪ್ತ ಸಹಾಯಕರನ್ನು ಮಾರ್ಚ್ 3ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande