ನಾನಾ ಯೋಜನೆಗೆ ಅರ್ಜಿ ಆಹ್ವಾನ
ದಾವಣಗೆರೆ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ಮರಾಠ ಸಮುದಾಯ ಹಾಗೂ ಇದರ ಉಪ ಸಮುದಾಯದವರಿಂದ ಆಹಾರವಾಹಿನಿ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮರಾಠ ಸಮುದಾಯದ ಹಿಂದುಳಿದ ವರ್ಗಗಳ ಅರ್ಜಿದಾರ
ನಾನಾ ಯೋಜನೆಗೆ ಅರ್ಜಿ ಆಹ್ವಾನ


ದಾವಣಗೆರೆ, 22 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ಮರಾಠ ಸಮುದಾಯ ಹಾಗೂ ಇದರ ಉಪ ಸಮುದಾಯದವರಿಂದ ಆಹಾರವಾಹಿನಿ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮರಾಠ ಸಮುದಾಯದ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್. ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್, ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ನಿಗಮದ ವೆಬ್ಸೈಟ್ http://kmcdc.karnataka.gov.in/kn/ ನಲ್ಲಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಮಾರ್ಚ್ 5 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-29903994 ಮತ್ತು 8867537799 ಸಂಪರ್ಕಿಸಬಹುದೆಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande