ಉಚಿತ ಆರೋಗ್ಯ ಶಿಬಿರ ಆಯೋಜನೆ
ವಿಜಯಪುರ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಪುರುಷರಲ್ಲಿ ವೀರ್ಯಾಣು ಕೊರತೆಯ ಸಮಸ್ಯೆ (Oligozoospermia) ಕುರಿತು ಉಚಿತ ತಪಾಸಣೆ ಮತ
ಉಚಿತ ಆರೋಗ್ಯ ಶಿಬಿರ ಆಯೋಜನೆ


ವಿಜಯಪುರ, 24 ಫೆಬ್ರವರಿ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಪುರುಷರಲ್ಲಿ ವೀರ್ಯಾಣು ಕೊರತೆಯ ಸಮಸ್ಯೆ (Oligozoospermia) ಕುರಿತು ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಫೆಬ್ರವರಿ 27 ಮತ್ತು 28 ರಂದು ಶುಕ್ರವಾರ ಮತ್ತು ಶನಿವಾರ ನಡೆಯಲಿದೆ.

ಇಂಥ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಆಯುರ್ವೇದ ಮಹಾವಿದ್ಯಾಲಯದ ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಡಾ. ಬದರಿನಾರಾಯಣ ಕುಲಕರ್ಣಿ, ಮೊ. ನಂ. 8277524506 ಮತ್ತು 8073518596 ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande