ಅರಾಜಕತೆ, ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ : ಆರ್. ಅಶೋಕ ವಾಗ್ದಾಳಿ
ಬೆಂಗಳೂರು, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ವಿವಿಧ ವರ್ಗಗಳ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವ ನಡುವೆಯೇ, ಪ್ರತಿ ಪಕ್ಷದ ನಾಯಕ ಆರ್.ಅಶೋಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. “ಕಾಂಗ್ರೆಸ್ ಅಧಿಕಾರದಲ್ಲಿದೆ, ಆದರೆ ಜನರು ಬೀದಿಗಿಳಿದಿದ್ದಾರೆ. ಇದು ಅವರ ಆರನೇ ಗ್ಯಾರ
Anarchy


ಬೆಂಗಳೂರು, 25 ಫೆಬ್ರವರಿ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ವಿವಿಧ ವರ್ಗಗಳ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವ ನಡುವೆಯೇ, ಪ್ರತಿ ಪಕ್ಷದ ನಾಯಕ ಆರ್.ಅಶೋಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. “ಕಾಂಗ್ರೆಸ್ ಅಧಿಕಾರದಲ್ಲಿದೆ, ಆದರೆ ಜನರು ಬೀದಿಗಿಳಿದಿದ್ದಾರೆ. ಇದು ಅವರ ಆರನೇ ಗ್ಯಾರೆಂಟಿ – ಅರಾಜಕತೆ ಗ್ಯಾರೆಂಟಿ” ಎಂದು ಅವರು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಆಡಳಿತ ವೈಫಲ್ಯದಿಂದ ಸಮಾಜದ ಪ್ರತಿ ವರ್ಗವೂ ಹೋರಾಟದ ಮಾರ್ಗ ಹಿಡಿದಿದೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಹೋರಾಟಗಳನ್ನು ಉಲ್ಲೇಖಿಸಿರುವ ಅವರು,

ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಂದ ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ,

ರಾಜ್ಯ ಸರ್ಕಾರಿ ವೈದ್ಯರಿಂದ ವಿವಿಧ ಬೇಡಿಕೆಗಳಿಗೆ ಮಾರ್ಚ್ 11ರಿಂದ ಒಪಿಡಿ ಬಂದ್ ಘೋಷಣೆ,

₹37,000 ಕೋಟಿ ಬಾಕಿ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಾರ್ಚ್ 6ರಂದು ಕಾಮಗಾರಿ ಸ್ಥಗಿತ,

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದ ವಿರುದ್ಧ ಬಂಜಾರ, ಭೋವಿ, ಕೊರಮ, ಕೊರಚ ಹಾಗೂ ಅಲೆಮಾರಿ ಸಮುದಾಯಗಳ ಆಕ್ರೋಶ,

ಒಳಮೀಸಲಾತಿ ಅನ್ಯಾಯ ವಿರೋಧಿಸಿ ಎಸ್ಸಿ ಬಲಗೈ ಸಮುದಾಯದ ಪ್ರತಿಭಟನೆ,

ಬಿಡದಿ ಟೌನ್ಶಿಪ್ ಯೋಜನೆ, ಸೆಣಬು ಸಬ್ಸಿಡಿ ಬಂದ್ ಹಾಗೂ ಕಬ್ಬು ಬಿಲ್ ಬಾಕಿ ವಿಚಾರವಾಗಿ ರೈತರ ಹೋರಾಟ,

ವೇತನ ಹೆಚ್ಚಳ ಸೇರಿದಂತೆ ಬೇಡಿಕೆಗಳಿಗೆ ಫೆ. 27ರಿಂದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ,

38 ತಿಂಗಳ ಹಿಂಬಾಕಿ ಪಾವತಿಗೆ ಸಾರಿಗೆ ನೌಕರರಿಂದ ಮುಷ್ಕರ

ಇವುಗಳೆಲ್ಲವೂ ಸರ್ಕಾರದ ಆಡಳಿತ ವೈಫಲ್ಯಕ್ಕೆ ಉದಾಹರಣೆಗಳಾಗಿವೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ , ಆಡಳಿತದಲ್ಲಿ ಒಬ್ಬರೂ ನೆಮ್ಮದಿಯಿಂದಿಲ್ಲ. ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಇನ್ನೇನು ಸಾಕ್ಷಿ ಬೇಕು?” ಎಂದು ಪ್ರಶ್ನಿಸಿದ್ದು, ರಾಜ್ಯದಲ್ಲಿ ಉದ್ಭವಿಸಿರುವ ಸಮಸ್ಯೆಗಳ ಬಗ್ಗೆ ಸರ್ಕಾರ ತಕ್ಷಣ ಸ್ಪಂದಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande