ಛತ್ತೀಸ್ಗಢದಲ್ಲಿ ನಕ್ಸಲೀಯರಿಗೆ ಹಿನ್ನಡೆ : ಡಿವಿಸಿಎಂ ಮಲ್ಲೇಶ್ ಶರಣು
ಛತ್ತೀಸ್ಗಢ ವು
Surrender


ರಾಯ್ಪುರ, 25 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಛತ್ತೀಸ್‌ಗಢದ ಉತ್ತರ ಬಸ್ತಾರ್ ವಲಯದಲ್ಲಿ ನಕ್ಸಲೀಯ ಚಟುವಟಿಕೆಗಳಿಗೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ನಕ್ಸಲೀಯ ಸಂಘಟನೆಯ ವಿಭಾಗೀಯ ಸಮಿತಿ ಸದಸ್ಯ ಮಲ್ಲೇಶ್ ಅವರು ಕಂಕೇರ್ ಜಿಲ್ಲೆಯ ನಕ್ಸಲ್ ಪೀಡಿತ ಛೋಟೆಬೆಥಿಯಾ ಪ್ರದೇಶದಲ್ಲಿರುವ ಬಿಎಸ್ಎಫ್ ಶಿಬಿರದಲ್ಲಿ ಎಕೆ-47 ಅಸಾಲ್ಟ್ ರೈಫಲ್ನೊಂದಿಗೆ ಶರಣಾಗಿದ್ದಾರೆ.

ಈ ವಿಚಾರವನ್ನು ಕಂಕೇರ್ ಪೊಲೀಸರು ಹಾಗೂ ಬಿಎಸ್ಎಫ್ ಅಧಿಕಾರಿಗಳು ದೃಢಪಡಿಸಿದ್ದಾರೆ. ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ರಾಜ್ಯ ಸರ್ಕಾರದ ಶರಣಾಗತಿ ಹಾಗೂ ಪುನರ್ವಸತಿ ನೀತಿಯಡಿ ಮಲ್ಲೇಶ್ ಅವರಿಗೆ ಸೌಲಭ್ಯಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮಲ್ಲೇಶ್ ದಂಡಕಾರಣ್ಯ ಪ್ರದೇಶದಲ್ಲಿ ದೀರ್ಘಕಾಲದಿಂದ ಸಕ್ರಿಯರಾಗಿದ್ದು, ನಕ್ಸಲೀಯ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರೆಂದು ತಿಳಿದು ಬಂದಿದೆ. ಭದ್ರತಾ ಪಡೆಗಳು ಹಾಗೂ ಪೊಲೀಸರು ಅವರಿಗಾಗಿ ನಿರಂತರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು.

ಸ್ಥಳೀಯ ಗ್ರಾಮಸ್ಥರ ಸಹಾಯದಿಂದ ಮಲ್ಲೇಶ್ ಬಿಎಸ್ಎಫ್ ಶಿಬಿರವನ್ನು ತಲುಪಿದ್ದು, ಗ್ರಾಮಸ್ಥರ ಸಮ್ಮುಖದಲ್ಲೇ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಶರಣಾಗತಿ ಉತ್ತರ ಬಸ್ತಾರ್ ಪ್ರದೇಶದಲ್ಲಿ ನಕ್ಸಲೀಯ ಸಂಘಟನೆಗೆ ಭಾರೀ ಹಿನ್ನಡೆಯಾಗಿದ್ದು, ಭದ್ರತಾ ಪಡೆಗಳು ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಾಚರಣೆಗಳನ್ನು ತೀವ್ರಗೊಳಿಸುವ ಸೂಚನೆ ನೀಡಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande