


ಗಂಗಾವತಿ, 25 ಫೆಬ್ರವರಿ (ಹಿ.ಸ.) :
ಆ್ಯಂಕರ್ : ನಗರದ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದಡಿ ಗಣಿತಶಾಸ್ತ್ರ ವಿಭಾಗದಿಂದ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಧಾರವಾಡದ ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ.ಬಿ.ಪರ್ವತಲು ವಿಶೇಷ ಉಪನ್ಯಾಸ ನೀಡಿ, ಗಣಿತಶಾಸ್ತ್ರದ ಸ್ಪರ್ಧಾತ್ಮಕ ಸವಾಲುಗಳು ಹಾಗೂ ಇರುವ ಉದ್ಯೋಗಾವಕಾಶಗಳನ್ನು ಸವಿಸ್ತಾರವಾಗಿ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ.ಶಿವರಾಜ ಗುರಿಕಾರ ವಹಿಸಿದ್ದರು. ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕ ಮಂಜುನಾಥ ಕೆ.ಎಚ್, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಅಣ್ಣೋಜಿರಡ್ಡಿ ಉಪಸ್ಥಿತರಿದ್ದರು. ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಅಶೋಕ.ಕೆ, ಪ್ರಾಸ್ತಾವಿಕ ಮಾತನಾಡಿದರು. ಅತಿಥಿ ಉಪನ್ಯಾಸಕರಾದ ನಿರೋಷ ಎನ್ ಸ್ವಾಗತಿಸಿದರು. ಶರಣಬಸವ ಅತಿಥಿ ಪರಿಚಯ ಮಾಡಿದರು. ನೇತ್ರಾ ಸಜ್ಜನ್ ವಂದಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಸಮಾರಂಭದಲ್ಲಿ ಹಾಜರಿದ್ದು, ಕಾರ್ಯಕ್ರಮದ ಪ್ರಯೋಜನ ಪಡೆದರು.
ಉಪನ್ಯಾಸದ ನಂತರ ಡಾ.ಬಿ.ಪರ್ವತಲು ಅವರನ್ನು ಸತ್ಕರಿಸಿ, ಗೌರವಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್