
ಬೆಂಗಳೂರು, 25 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪದ ಅಲಂಕಾರಿಕ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಭಾರಿ ಬೆಂಕಿ ಅವಘಡ ಸಂಭವಿಸಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿ ಸಂಗ್ರಹಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದು ಬಂದಿದೆ. ಬೆಂಕಿ ಹೊತ್ತಿಕೊಂಡ ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಆರು ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ.
ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಕಾರ್ಯಾಚರಣೆ ನಡೆಯುತ್ತಿದ್ದು, ಬೆಂಕಿ ನಿಯಂತ್ರಣಕ್ಕೆ ತರಲು ಹರಸಾಹಸ ಪಡಲಾಗುತ್ತಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲವೆಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa