
ಪುಣೆ, 25 ಫೆಬ್ರವರಿ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಶರದ್ ಪವಾರ್ ಬಣ)ದ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ಇಂದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಫೆಬ್ರವರಿ 9ರಂದು ಎದೆ ಸೋಂಕಿನ ಸಮಸ್ಯೆಯಿಂದ ಪವಾರ್ ಅವರನ್ನು ಪುಣೆ ರೂಬಿ ಕ್ಲಿನಿಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರು ಅವರನ್ನು ಬಿಡುಗಡೆ ಮಾಡಿದ್ದಾರೆ.
“ಶರದ್ ಪವಾರ್ ಅವರು ಆರೋಗ್ಯವಾಗಿದ್ದಾರೆ. ಮುಂದಿನ ಕೆಲವು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿದೆ. ನಂತರ ಅವರು ತಮ್ಮ ಸಾಮಾನ್ಯ ಕಾರ್ಯಚಟುವಟಿಕೆಗಳಿಗೆ ಮರಳಬಹುದು” ಎಂದು ರೂಬಿ ಕ್ಲಿನಿಕ್ ಆಸ್ಪತ್ರೆಯ ಮುಖ್ಯ ಹೃದ್ರೋಗ ತಜ್ಞ ಹಾಗೂ ಅಧ್ಯಕ್ಷ ಡಾ. ಪುರ್ವೇಜ್ ಗ್ರಾಂಟ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa