ರಣಜಿ ಪೈನಲ್ ಪಂದ್ಯ : ಜಮ್ಮು ಕಾಶ್ಮೀರ, 584 ರನ್ಗಳಿಗೆ ಆಲೌಟ್
ರನ್ ಗಳಿಗೆ
Ranaji


ಹುಬ್ಬಳ್ಳಿ, 26 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿಯ ರಾಜನಗರದ ಕೆಎಸ್ಸಿಎ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಜಮ್ಮು-ಕಾಶ್ಮೀರ ಮೊದಲ ಇನಿಂಗ್ಸ್ನಲ್ಲಿ 584 ರನ್‌ಗಳಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಜಮ್ಮು-ಕಾಶ್ಮೀರ ಪರ ಆರಂಭಿಕನಾಗಿ ಕಣಕ್ಕಿಳಿದ ಯಾವರ್ ಹಸನ್ 88 ರನ್ ಬಾರಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭಂ ಪುಂಡಿರ್ 121 ರನ್ ಗಳಿಸಿದ್ದರು.

ನಾಲ್ಕನೇ ಕ್ರಮಾಂಕದಲ್ಲಿ ಆಡಿದ ನಾಯಕ ಪರಸ್ ಡೋಗ್ರಾ 70 ರನ್ಗಳ ಇನಿಂಗ್ಸ್ ಆಡಿದರು. ಮತ್ತೊಂದೆಡೆ ಅಬ್ದುಲ್ ಸಮದ್ 61 ರನ್ಗಳ ಕೊಡುಗೆ ನೀಡಿದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಕನ್ಹಯ್ಯಾ 70 ರನ್ ಬಾರಿಸಿದರೆ, ಸಾಹಿಲ್ ಲೋಟ್ರಾ 78 ರನ್ ಗಳಿಸಿದರು. ಈ ಮೂಲಕ ಜಮ್ಮು-ಕಾಶ್ಮೀರ ತಂಡವು ಮೊದಲ ಇನಿಂಗ್ಸ್ನಲ್ಲಿ 584 ರನ್ಗಳಿಸಿ ಆಲೌಟ್ ಆಗಿದೆ.

ಕರ್ನಾಟಕ ಪರ ಉತ್ತಮ ಬಾಲಿಂಗ್ ದಾಳಿ ನಡೆಸಿದ ಪ್ರಸಿದ್ಧ್ ಕೃಷ್ಣ 34.1 ಓವರ್ಗಳಲ್ಲಿ 98 ರನ್ ನೀಡಿ 5 ವಿಕೆಟ್ ಕಬಳಿಸಿದರು. ಜಮ್ಮು-ಕಾಶ್ಮೀರದ ಇನಿಂಗ್ಸ್ ಮುಕ್ತಾಯದ ಬೆನ್ನಲ್ಲೇ ಕರ್ನಾಟಕ ತಂಡ ಮೊದಲ ಇನಿಂಗ್ಸ್ ಆರಂಭಿಸಿದೆ.

ಇದೀಗ ಮೂರನೇ ದಿನದಾಟ ನಡೆಯುತ್ತಿರುವುದರಿಂದ ಪ್ರಥಮ ಇನಿಂಗ್ಸ್ ಕರ್ನಾಟಕ ತಂಡಕ್ಕೆ ನಿರ್ಣಾಯಕವಾಗಿದ್ದು ಮೊದಲ ಇನಿಂಗ್ಸ್ನಲ್ಲಿ ಮುನ್ನಡೆ ಸಾಧಿಸುವುದು ಅನಿವಾರ್ಯವಾಗಿದೆ. ಇಲ್ಲವಾದಲ್ಲಿ ಜಮ್ಮ ಕಾಶ್ಮೀರ ತಂಡ ಪಂದ್ಯವನ್ನು ಡ್ರಾನಲ್ಲಿ ಅಂತ್ಯಗೊಳಿಸಿ ಮೊದಲ ಇನಿಂಗ್ಸ್ ಮುನ್ನಡೆ ಆಧಾರದಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಸಾಧ್ಯತೆ ಹೆಚ್ಚಾಗಿದೆ.

ಜಮ್ಮು ಮತ್ತು ಕಾಶ್ಮೀರ ತಂಡ: ಕಮ್ರಾನ್ ಇಕ್ಬಾಲ್, ಯಾವರ್ ಹಸನ್, ಶುಭಂ ಪುಂಡೀರ್, ಪರಸ್ ಡೋಗ್ರಾ (ನಾಯಕ), ಅಬ್ದುಲ್ ಸಮದ್, ಕನ್ಹಯ್ಯಾ ವಾಧವನ್ (ವಿಕೆಟ್ ಕೀಪರ್), ಅಬಿದ್ ಮುಷ್ತಾಕ್, ಆಖಿಬ್ ನಬಿ ದಾರ್, ಯುದ್ವೀರ್ ಸಿಂಗ್ ಚರಕ್, ಸಾಹಿಲ್ ಲೋತ್ರಾ, ಸುನೀಲ್ ಕುಮಾರ್.

ಕರ್ನಾಟಕ ತಂಡ: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ದೇವದತ್ ಪಡಿಕ್ಕಲ್ (ನಾಯಕ), ಕರುಣ್ ನಾಯರ್, ಸ್ಮರಣ್ ರವಿಚಂದ್ರನ್, ಶ್ರೇಯಸ್ ಗೋಪಾಲ್, ಕೃತಿಕ್ ಕೃಷ್ಣ (ವಿಕೆಟ್ ಕೀಪರ್), ವಿದ್ಯಾಧರ್ ಪಾಟೀಲ್, ವಿಜಯ್ ಕುಮಾರ್ ವೈಶಾಕ್, ಶಿಖರ್ ಶೆಟ್ಟಿ, ಪ್ರಸಿದ್ಧ್ ಕೃಷ್ಣ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande