ಟ್ರಾಫಿಕ್ ಸಮಸ್ಯೆ ಹಂತ-ಹಂತವಾಗಿ ಪರಿಹಾರಕ್ಕೆ ಕ್ರಮ : ಎಸ್ಪಿ
ಬಳ್ಳಾರಿ, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ನಗರದಲ್ಲಿ ಟ್ರಾಫಿಕ್ ಸಮಸ್ಯೆಗೆ ಸಂಬಂಧಿಸಿದಂತೆ ಹಂತ- ಹಂತವಾಗಿ ಪರಿಹಾರ ಮಾರ್ಗ ಕಂಡುಕೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ಹೇಳಿದ್ದಾರೆ. ಜಿಲ್ಲಾ ಪೆÇಲೀಸ್ ಇಲಾ
Steps to resolve traffic problem step by step: SP


Steps to resolve traffic problem step by step: SP


Steps to resolve traffic problem step by step: SP


ಬಳ್ಳಾರಿ, 26 ಫೆಬ್ರವರಿ (ಹಿ.ಸ.) :

ಆ್ಯಂಕರ್ : ನಗರದಲ್ಲಿ ಟ್ರಾಫಿಕ್ ಸಮಸ್ಯೆಗೆ ಸಂಬಂಧಿಸಿದಂತೆ ಹಂತ- ಹಂತವಾಗಿ ಪರಿಹಾರ ಮಾರ್ಗ ಕಂಡುಕೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ಹೇಳಿದ್ದಾರೆ.

ಜಿಲ್ಲಾ ಪೆÇಲೀಸ್ ಇಲಾಖೆ, ಸಂಚಾರ ಪೊಲೀಸ್ ಠಾಣೆ ವತಿಯಿಂದ ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆ, ಇದರಿಂದಾಗಿ ಸಾರ್ವಜನಿಕರಿಗೆ ಆಗುವ ಸಮಸ್ಯೆ ಹಾಗೂ ಪರಿಹಾರ ಕುರಿತು ಚರ್ಚಿಸಲು ನಗರದ ಬಿಡಿಎಎ ಮೈದಾನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಂಚಾರ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಎಲ್ಲಾ ಇಲಾಖೆಗಳ ಅಗತ್ಯ ಸಹಕಾರದೊಂದಿಗೆ ಆಟೋ, ಲಾರಿ, ಕಿರಾಣಿ ಅಂಗಡಿ- ಬೀದಿ ಬದಿ ವ್ಯಾಪಾರಸ್ಥರು ಹಾಗೂ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳ ಕೈಜೋಡಿಸುವಿಕೆಯ ಅಭಿಮತ ಬೇಕಿದೆ ಎಂದರು.

ನಗರದಲ್ಲಿ ಟ್ರಾಫಿಕ್ ಸಮಸ್ಯೆಗಳನ್ನು ಹಂತ- ಹಂತವಾಗಿ ಪರಿಹಾರ ಮಾರ್ಗ ಕಂಡುಕೊಂಡು ಸೂಕ್ತ ಕ್ರಿಯಾಯೋಜನೆ ರೂಪಿಸಿ ಸಾರ್ವಜನಿಕ ಓಡಾಟಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಅವರು ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ವೃತ್ತ, ಬಡಾವಣೆಗಳಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು. ಇದಕ್ಕೆ ಎಲ್ಲರ ಸಹಕಾರವೂ ಅಗತ್ಯವಿದೆ ಎಂದರು.

ನಗರದಲ್ಲಿ ಆಟೋ ಚಾಲಕರು ನಿಧಾನಗತಿಯಲ್ಲಿ ವಾಹನ ಚಲಾಯಿಸಬೇಕು. ತತ್ ಕ್ಷಣ ಬ್ರೇಕ್ ಹಾಕುವುದು, ಹಿಂಬದಿ ಸವಾರರಿಗೆ ತೊಂದರೆ ಉಂಟುಮಾಡುವುದು ಮಾಡಬಾರದು. ಹಾಗಾಗಿ ನಿಧಾನಗತಿಯಲ್ಲಿ ವಾಹನ ಚಲಾವಣೆ ಮಾಡಬೇಕು ಎಂದರು.

ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಮಾರ್ಗ ಕಂಡುಕೊಳ್ಳಲು ಪ್ರಾದೇಶಿಕ ಸಾರಿಗೆ ಇಲಾಖೆ, ಪೆÇಲೀಸ್ ಇಲಾಖೆಯೊಂದಿಗೆ ಮಹಾನಗರ ಪಾಲಿಕೆಯು ಒಳಗೊಂಡ ಚರ್ಚಿಸಿ ಪೂರಕ ಕ್ರಮ ವಹಿಸಲಾಗುವುದು ಎಂದರು.

ಸಾರ್ವಜನಿಕರಿಂದ ಅಹವಾಲು

ನಗರದಲ್ಲಿ ವಿವಿಧೆಡೆ ಸಂಚಾರ ದಟ್ಟಣೆ ಇರುವಲ್ಲಿ ಸ್ಪೀಡ್ ಬ್ರೇಕರ್ ಅಳವಡಿಸಬೇಕು. ಸಂಜೆ ವೇಳೆಯಾದರೆ ನಗರದ ಹೊರಭಾಗದ ಲೇ ಔಟ್ ಗಳಲ್ಲಿ ಮದ್ಯ ಸೇವನೆ, ರಾತ್ರಿಯಾದರೆ ಕಳ್ಳತನ ಪ್ರಕರಣ ಹೆಚ್ಚುತ್ತಿವೆ. ಹಾಗಾಗಿ ಲೇ ಔಟ್ ಮಾಲೀಕರಿಗೆ ಸಿಸಿಟಿವಿ, ಭದ್ರತಾ ಸಿಬ್ಬಂದಿ ನಿಯೋಜಿಸುವಂತೆ ಅವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಸಾರ್ವಜನಿಕರೊಬ್ಬರು ಸಭೆಗೆ ತಿಳಿಸಿದರು.

ನಗರದಲ್ಲಿ ವಿವಿಧ ಬಡಾವಣೆಗಳ ಮುಖ್ಯರಸ್ತೆಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಇವುಗಳಿಗೆ ವೇಗ ನೀಡಿ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರೊಬ್ಬರು ಸಭೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್, ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿಗಳಾದ ಕೆ.ಪಿ.ರವಿಕುಮಾರ್. ನವೀನ್ ಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ನಿಜಾಮುದ್ದೀನ್ ಶರೀಫ್, ಲೋಕೋಪಯೋಗಿ ಇಲಾಖೆಯ ಅಭಿಯಂತರ ಬಸರೆಡ್ಡಿ, ಸಂಚಾರ ಪೆÇಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ರುದ್ರಪ್ಪ ಸೇರಿದಂತೆ ಕೆಕೆಆರ್ಟಿಸಿ, ಕೆಇಬಿ ಅಧಿಕಾರಿಗಳು, ಬಳ್ಳಾರಿ ಚೇಂಬರ್ಸ್ ಆಫ್ ಕಾಮರ್ಸ್ ನ ಅಧ್ಯಕ್ಷರು, ಕಿರಾಣಿ ಅಂಗಡಿ ವ್ಯಾಪಾರಸ್ಥರು, ಖಾಸಗಿ ಬಸ್ ಮಾಲೀಕರು- ಚಾಲಕರು, ಲಾರಿ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು, ಆಟೋ ಯೂನಿಯನ್ ಅಧ್ಯಕ್ಷರು ಹಾಗೂ ಮಾಲೀಕ- ಚಾಲಕರು, ಟ್ಯಾಕ್ಸಿ ಸಂಘದ ಅಧ್ಯಕ್ಷರು ಹಾಗೂ ಮಾಲಿಕ- ಚಾಲಕರು, ಬೀದಿ ಬದಿ ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande