ಮಾರ್ಚ್ 2 ರಂದು ಬಾಲ್ಯ ವಿವಾಹ ಮುಕ್ತಿ ರಥಕ್ಕೆ ಚಾಲನೆ
ಕೊಪ್ಪಳ, 27 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬಾಲ್ಯ ವಿವಾಹ ಮುಕ್ತ ಭಾರತಕ್ಕಾಗಿ ಹಮ್ಮಿಕೊಂಡಿರುವ 100 ದಿನಗಳ ಅಭಿಯಾನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೆÇಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ
Child marriage abolition chariot launched on March 2


ಕೊಪ್ಪಳ, 27 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಬಾಲ್ಯ ವಿವಾಹ ಮುಕ್ತ ಭಾರತಕ್ಕಾಗಿ ಹಮ್ಮಿಕೊಂಡಿರುವ 100 ದಿನಗಳ ಅಭಿಯಾನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೆÇಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ 1098/112 ಹಾಗೂ ಸ್ಪಂದನ ಆಸೋಶಿಯೇಷನ್ ಇವರುಗಳ ಸಂಯುಕ್ತಾಶ್ರಯದಲ್ಲಿ ಮಾರ್ಚ್ 2 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಬಾಲ್ಯವಿವಾಹ ಮುಕ್ತಿ ರಥಕ್ಕೆ ಚಾಲನೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕೆ. ರಾಜಶೇಖರ ಹಿಟ್ನಾಳ ಅವರು ಉದ್ಘಾಟಿಸುವರು. ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಗಳಾದ ಡಾ. ರಾಮ ಎಲ್ ಅರಸಿದ್ದಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪರಶುರಾಮ ಶೆಟ್ಟೆಪ್ಪನವರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆಯ ಸಂಯೋಜಕರಾದ ಹರೀಶ ಜೋಗಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವಿ.ಬಿ ಅಂಗಡಿ ಹಾಗೂ ಬೆಳಗಾವಿಯ ಸ್ಪಂದನ ಸಂಸ್ಥೆಯ ಕಾರ್ಯದರ್ಶಿಗಳಾದ ಎ. ಸುಶೀಲ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande