
ಕೋಲಾರ, ೨೭ ಫೆಬ್ರವರಿ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರ ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉರ್ದು ಭಾಷೆಯಲ್ಲಿ ಹೊರಡಿಸಿರುವುದನ್ನು ಕೋಲಾರ ಜಿಲ್ಲೆ ಕರವೇ ಪ್ರವೀಣ್ ಶೆಟ್ಟಿ ಬಣ ಜಿಲ್ಲಾಧ್ಯಕ್ಷ ಹಾಗೂ ಕನ್ನಡ ಪರ ಸಂಘಟನೆಗಳ ಜಿಲ್ಲಾಧ್ಯಕ್ಷ ಚಂಬೆ ರಾಜೇಶ್ ತೀವ್ರವಾಗಿ ಖಂಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶೇಕಡ ೬೦ರಷ್ಟು ಕನ್ನಡ ೪೦ ರಷ್ಟು ಆಂಗ್ಲ ಭಾಷೆ ಎಂಬ ಆದೇಶವನ್ನು ಹೊರಡಿಸಿರುತ್ತಾರೆ ಆದರೆ ರಾಜ್ಯ ಸರ್ಕಾರದ ಕಾರ್ಯಕ್ರಮಕ್ಕೆ ಕನ್ನಡವನ್ನು ಕಡೆಗಣಿಸಿ ಉರ್ದುವಿನಲ್ಲಿ ಆಹ್ವಾನ ಪತ್ರಿಕೆ ಮಾಡಿರುವುದು ತೀವ್ರ ಖಂಡನೀಯ. ಒಂದು ಜನಾಂಗದ ಓಲೈಕೆಗಾಗಿ ಕನ್ನಡವನ್ನೇ ಮರೆತ ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಯಾವುದೇ ಸಭೆ ಸಮಾರಂಭದಲ್ಲಿ ಕನ್ನಡ ಭಾಷೆಗೆ ಮೊದಲನೇ ಆದ್ಯತೆ ನೀಡಬೇಕೆಂದು ಇಲ್ಲದಿದ್ದರೆ ರಾಜ್ಯದ ಎಲ್ಲಾ ಕನ್ನಡಪರ ಸಂಘಟನೆಗಳ ರಾಜ್ಯ ಸರ್ಕಾರದ ವಿರುದ್ಧ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಈ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡುತ್ತಿದ್ದೇವೆ. ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಕೋಲಾರ ಜಿಲ್ಲೆ ಕರವೇ ಪ್ರವೀಣ್ ಶೆಟ್ಟಿ ಬಣ ಜಿಲ್ಲಾಧ್ಯಕ್ಷ ಹಾಗೂ ಕನ್ನಡ ಪರ ಸಂಘಟನೆಗಳ ಜಿಲ್ಲಾಧ್ಯಕ್ಷ ಚಂಬೆ ರಾಜೇಶ್ ಶುಭಾಶಯಗಳು ಕೋರಿದ್ದಾರೆ.
ಚಿತ್ರ ; ಕನ್ನಡ ಪರ ಸಂಘಟನೆಗಳ ಜಿಲ್ಲಾಧ್ಯಕ್ಷ ಚಂಬೆ ರಾಜೇಶ್
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್