ಕುರಿ,ಮೇಕೆ ಘಟಕ ಪೂರೈಕೆ ಯೋಜನೆ: ಅರ್ಜಿ ಆಹ್ವಾನ
ಚಿತ್ರದುರ್ಗ, 28 ಫೆಬ್ರವರಿ (ಹಿ.ಸ.): ಆ್ಯಂಕರ್:ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 07 ಕೊನೆಯ ದಿನ. ಗ್ರಾಮೀಣ ಭಾಗದ ಪರಿಶಿಷ್ಟ ಜಾತ
ಕುರಿ,ಮೇಕೆ ಘಟಕ ಪೂರೈಕೆ ಯೋಜನೆ: ಅರ್ಜಿ ಆಹ್ವಾನ


ಚಿತ್ರದುರ್ಗ, 28 ಫೆಬ್ರವರಿ (ಹಿ.ಸ.):

ಆ್ಯಂಕರ್:ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 07 ಕೊನೆಯ ದಿನ.

ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಹಾಗೂ ಪಶುಸಂಗೋಪನೆಯಲ್ಲಿ ಆಸಕ್ತಿ ಹೊಂದಿರುವ 18 ರಿಂದ 60 ವರ್ಷ ವಯಸ್ಸಿನವರು ಅರ್ಹರು. ಮಹಿಳೆಯರಿಗೆ ಶೇ.33.3 ಮತ್ತು ವಿಶೇಷ ಚೇತನರಿಗೆ ಶೇ.3 ಆದ್ಯತೆ ನೀಡಲಾಗುತ್ತದೆ.

ಯೋಜನೆಯಡಿ 10 ಸುಧಾರಿತ ಹೆಣ್ಣು ಕುರಿ,ಮೇಕೆ ಹಾಗೂ 1 ಟಗರು,ಹೋತಕ್ಕೆ ಒಟ್ಟು ಘಟಕ ದರ ರೂ.1 ಲಕ್ಷವಾಗಿದ್ದು, ಶೇ.90ರಷ್ಟು ಸಹಾಯಧನ ನೀಡಲಾಗುತ್ತದೆ.

ಜಿಲ್ಲೆಗೆ ಒಟ್ಟು 42 ಗುರಿ (25 ಪರಿಶಿಷ್ಟ ಜಾತಿ, 17 ಪರಿಶಿಷ್ಟ ಪಂಗಡ) ನಿಗದಿಯಾಗಿದ್ದು, ತಾಲ್ಲೂಕುವಾರು ಹಂಚಿಕೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ, ಪಶು ಆಸ್ಪತ್ರೆ ಆವರಣ, ಚಿತ್ರದುರ್ಗ ಅಥವಾ ಸಂಬಂಧಿತ ತಾಲ್ಲೂಕು ಪಶು ಆಸ್ಪತ್ರೆಯನ್ನು ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕಿ ಕೆ. ವಾಸಂತಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande