.೨ರಂದು ವಿಶೇಷ ಚೇತನರಿಗೆ ತ್ರಿ-ಚಕ್ರ ವಾಹನ ವಿತರಣೆ
ಚಿತ್ರದುರ್ಗ, 28 ಫೆಬ್ರವರಿ (ಹಿ.ಸ.): ಆ್ಯಂಕರ್: ಚಿತ್ರದುರ್ಗ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿ-ಚಕ್ರವಾಹನಗಳ ವಿತರಣಾ ಕಾರ್ಯಕ್ರಮವನ್ನು ಮಾರ್ಚ್ 02ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತ್ ಆವರಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನ
.೨ರಂದು ವಿಶೇಷ ಚೇತನರಿಗೆ ತ್ರಿ-ಚಕ್ರ ವಾಹನ ವಿತರಣೆ


ಚಿತ್ರದುರ್ಗ, 28 ಫೆಬ್ರವರಿ (ಹಿ.ಸ.):

ಆ್ಯಂಕರ್:

ಚಿತ್ರದುರ್ಗ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿ-ಚಕ್ರವಾಹನಗಳ ವಿತರಣಾ ಕಾರ್ಯಕ್ರಮವನ್ನು ಮಾರ್ಚ್ 02ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತ್ ಆವರಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ ಉದ್ಘಾಟಿಸಲಿದ್ದು, ಕಾರ್ಮಿಕ ಸಚಿವ ಸಂತೋಷ ಲಾಡ್, ಸಂಸದ ಗೋವಿಂದ ಕಾರಜೋಳ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ವಿವಿಧ ಕೈಗಾರಿಕೆಗಳ ಸಹಯೋಗದಲ್ಲಿ ನೀಡಲಾಗುವ ಈ ವಾಹನಗಳು ವಿಶೇಷ ಚೇತನರ ಸಂಚಾರ ಸುಲಭಗೊಳಿಸಿ ಸ್ವಾವಲಂಬನೆಗೆ ನೆರವಾಗಲಿವೆ ಎಂದು ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande