ತಿಮ್ಮಾಪುರ ಮಹಿಳೆಯರ ಮಾದರಿ ನಡೆ : ಸಚಿವೆ ಹೆಬ್ಬಾಳಕರ್ ಶ್ಲಾಘನೆ
ಬೆಂಗಳೂರು, 28 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ 850 ಕ್ಕೂ ಹೆಚ್ಚು ಮಹಿಳೆಯರು ತಮ್ಮ ಗೃಹಲಕ್ಷ್ಮೀ ಯೋಜನೆಯ ಮಾಸಿಕ ಹಣವನ್ನು ಕೂಡಿಟ್ಟು, ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನಿರ್ಮಾಣಕ್ಕೆ ದೇಣಿಗೆ ನೀಡಿರುವುದು ನಿಜಕ್ಕೂ ಮಾದರಿಯಾದ ಕೆಲಸ ಎಂದು ಮಹಿಳಾ ಮತ್ತ
praises


ಬೆಂಗಳೂರು, 28 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ 850 ಕ್ಕೂ ಹೆಚ್ಚು ಮಹಿಳೆಯರು ತಮ್ಮ ಗೃಹಲಕ್ಷ್ಮೀ ಯೋಜನೆಯ ಮಾಸಿಕ ಹಣವನ್ನು ಕೂಡಿಟ್ಟು, ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನಿರ್ಮಾಣಕ್ಕೆ ದೇಣಿಗೆ ನೀಡಿರುವುದು ನಿಜಕ್ಕೂ ಮಾದರಿಯಾದ ಕೆಲಸ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಆರ್ಥಿಕ ಸ್ವಾವಲಂಬನೆಯ ಜೊತೆಗೆ, ಇಂತಹ ಸತ್ಕಾರ್ಯಗಳಲ್ಲಿ ನಮ್ಮ ಮಹಿಳೆಯರು ತೋರುತ್ತಿರುವ ಉತ್ಸಾಹ ನನಗೆ ಹೆಮ್ಮೆ ತಂದಿದೆ. ಮಹಿಳೆಯರ ಕೈಬಲಪಡಿಸುವುದು ಎಂದರೆ ಇಡೀ ಸಮಾಜವನ್ನು ಬಲಪಡಿಸುವುದು ಎಂದರ್ಥ, ಅವರ ಈ ನಿಸ್ವಾರ್ಥ ಸೇವೆಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande