
ಹುಬ್ಬಳ್ಳಿ, 28 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಇತಿಹಾಸದಲ್ಲಿ ಸ್ಮರಣೀಯ ಕ್ಷಣವಾಗಿ ಉಳಿಯಲಿರುವ ರಣಜಿ ಟ್ರೋಫಿ ಫೈನಲ್ ಪಂದ್ಯದ ಅಂತಿಮ ದಿನದಾಟವನ್ನು ವೀಕ್ಷಿಸಲು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕರ್ನಾಟಕದ ಹುಬ್ಬಳ್ಳಿಗೆ ಆಗಮಿಸಿದ್ದಾರೆ.
ಹುಬ್ಬಳ್ಳಿಯ ಕೆಎಸ್ಸಿಎ ಮೈದಾನದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಜಮ್ಮು-ಕಾಶ್ಮೀರ ತಂಡ ಐತಿಹಾಸಿಕ ಗೆಲುವಿನ ಅಂಚಿನಲ್ಲಿದ್ದು, ಪ್ರಶಸ್ತಿ ಗೆಲ್ಲಲು ಕೆಲವೇ ಕ್ಷಣಗಳ ದೂರದಲ್ಲಿ ನಿಂತಿದೆ. ಪಂದ್ಯಾವಳಿಯಲ್ಲಿನ ತಂಡದ ಶ್ರೇಷ್ಠ ಪ್ರದರ್ಶನ ರಾಜ್ಯದ ಕ್ರಿಕೆಟ್ ಅಭಿಮಾನಿಗಳಲ್ಲಿ ಅಪಾರ ಉತ್ಸಾಹ ಹುಟ್ಟಿಸಿದೆ.
ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ತಂಡದ ಆಟಗಾರರಿಗೆ ಉತ್ತೇಜನ ನೀಡುವ ಸಲುವಾಗಿ ಅಂತಿಮ ದಿನದಾಟವನ್ನು ನೇರವಾಗಿ ವೀಕ್ಷಿಸುತ್ತಿದ್ದಾರೆ. ತಂಡದ ಈ ಸಾಧನೆ ಜಮ್ಮು-ಕಾಶ್ಮೀರ ಕ್ರಿಕೆಟ್ಗೆ ಹೊಸ ಅಧ್ಯಾಯವನ್ನು ತೆರೆದಿಡುವ ನಿರೀಕ್ಷೆ ಇದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa