
ಕೋಲಾರ, ೨೮ ಫೆಬ್ರವರಿ (ಹಿ.ಸ) :
ಆ್ಯಂಕರ್ : ಹಿಂದೆ ಇದ್ದಂತಹ ಸರ್ಕಾರಗಳು ಶಿಕ್ಷಕರಿಗೆ ಯಾವುದೇ ಸೌಲಭ್ಯಗಳು ಒದಗಿಸಿ ಕೊಟ್ಟಿಲ್ಲ,ಈಗ ನಮ್ಮ ಕಾಂಗ್ರೆಸ್ ಸರ್ಕಾರ ಶಿಕ್ಷಕರು ನೀಡಿದ ಎಲ್ಲಾ ಬೇಡಿಕೆಗಳನ್ನು ಈಡೇರಿಸಿದೆ ಎಂದು ಶಾಸಕ ಎಸ್.ಎನ್ ನಾರಾಯಣಸ್ವಾಮಿ ತಿಳಿಸಿದರು.
ಬಂಗಾರಪೇಟೆ ಪಟ್ಟಣದ ಎಸ್.ಎನ್ ರೆಸಾರ್ಟ್ ಬಳಿ ತಾಲೂಕಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ ಧನ್ಯತಾ ಸಮರ್ಪಣೆ ಹಾಗೂ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಲು ಬಸ್ ಗೆ ಚಾಲನೆ ನೀಡಿ ಮಾತನಾಡಿದ ಅವರು ಪ್ರಾಥಮಿಕ ಶಾಲಾ ಶಿಕ್ಷಕರು ಇಟ್ಟಿದಂತಹ ಎಲ್ಲಾ ಬೇಡಿಕೆಗಳನ್ನು ಈಗಾಗಲೇ ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಿಕ್ಷಣ ಇಲಾಖೆಯ ಮಂತ್ರಿಗಳಾದ ಮಧು ಬಂಗಾರಪ್ಪ ಅವರು ಈಡೇರಿಸಿದ್ದಾರೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರು ಹಮ್ಮಿಕೊಂಡಿರುವ ಅಭಿನಂದನ ಸಮಾರಂಭಕ್ಕೆ ತೆರಳುತ್ತಿರುವ ತಾಲೂಕಿನ ಎಲ್ಲಾ ಶಿಕ್ಷಕರಿಗೂ ಶುಭವಾಗಲಿ ಹಾಗೂ ನಮ್ಮ ತಾಲೂಕಿನ ಜನತೆ ಪರವಾಗಿ ಅಭಿನಂದನೆಯನ್ನು ಸಲ್ಲಿಸುತ್ತೇನೆ. ನಮ್ಮ ಸರ್ಕಾರ ಸದಾಕಾಲ ನಿಮ್ಮೊಡನೆ ಇರುತ್ತೇವೆ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಕಲಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಅಪ್ಪಯ್ಯಗೌಡ, ಶಿಕ್ಷಕರ ಸಂಘದ ಅಧ್ಯಕ್ಷ ಆಂಜನೇಯ ಗೌಡ, ನಾರಾಯಣಸ್ವಾಮಿ, ಕಾಂತರಾಜ್, ನಿರ್ಮಲಾ, ವೆಂಕಟೇಶ್, ಶ್ಯಾಮೂರ್ತಿ, ರಾಜಪ್ಪ, ಮುನಿನಾರಾಯಣಪ್ಪ, ಪ್ರೇಮ, ಮಂಜುನಾಥ್, ಅಶ್ವಥ್, ಹಾಗೂ ಎಲ್ಲಾ ಶಿಕ್ಷಕರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್