ನಿಗಮ–ಮಂಡಳಿ ಅಧ್ಯಕ್ಷರ ಅವಧಿ ಮುಂದುವರಿಸಿ ಅಧಿಸೂಚನೆ
ನಾನಾ
ನಿಗಮ–ಮಂಡಳಿ ಅಧ್ಯಕ್ಷರ ಅವಧಿ ಮುಂದುವರಿಸಿ ಅಧಿಸೂಚನೆ


ಬೆಂಗಳೂರು, 28 ಫೆಬ್ರವರಿ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ನಾನಾ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುವ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಾಮನಿರ್ದೇಶನಗೊಂಡ ಅಧ್ಯಕ್ಷರ ಅವಧಿ ಮುಕ್ತಾಯಗೊಂಡಿರುವ ಅಥವಾ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ, ಅವರ ಅಧಿಕಾರಾವಧಿಯನ್ನು ಮುಂದಿನ ಆದೇಶದವರೆಗೆ ಮುಂದುವರಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಸರ್ಕಾರದ ಆದೇಶದಂತೆ, ಸಂಬಂಧಿತ ಆಡಳಿತ ಇಲಾಖೆಗಳು ತಮ್ಮ ಅಧಿನಿಯಮ ಮತ್ತು ನಿಯಮಾವಳಿಗಳ ಪ್ರಕಾರ ತಕ್ಷಣದಿಂದಲೇ ಅಧ್ಯಕ್ಷರು ಕಾರ್ಯನಿರ್ವಹಿಸಲು ಅಗತ್ಯವಾದ ಅಧಿಕೃತ ಅಧಿಸೂಚನೆಗಳನ್ನು ಹೊರಡಿಸುವಂತೆ ಸೂಚಿಸಲಾಗಿದೆ.

ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ರಾಜ್ಯ ಶಿಷ್ಟಾಚಾರ) ಉಪ ಕಾರ್ಯದರ್ಶಿ ಪ್ರಕಟಣೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande