ಆಂಧ್ರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 18 ಕಾರ್ಮಿಕರ ಜೀವಂತ ದಹನ
ಕಾಕಿನಾಡ, 28 ಫೆಬ್ರವರಿ (ಹಿ.ಸ.) : ಆ್ಯಂಕರ್ : ಆಂಧ್ರ ಪ್ರದೇಶದ ಸಮರ್ಲಕೋಟ ಮಂಡಲ ವ್ಯಾಪ್ತಿಯ ವೆಟ್ಲಪಲೆಂ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭಾರಿ ಸ್ಫೋಟ ದುರಂತಕ್ಕೆ ಕನಿಷ್ಠ 18 ಕಾರ್ಮಿಕರು ಜೀವಂತವಾಗಿ ಸುಟ್ಟುಹೋಗಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊ
explosion


ಕಾಕಿನಾಡ, 28 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಆಂಧ್ರ ಪ್ರದೇಶದ ಸಮರ್ಲಕೋಟ ಮಂಡಲ ವ್ಯಾಪ್ತಿಯ ವೆಟ್ಲಪಲೆಂ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭಾರಿ ಸ್ಫೋಟ ದುರಂತಕ್ಕೆ ಕನಿಷ್ಠ 18 ಕಾರ್ಮಿಕರು ಜೀವಂತವಾಗಿ ಸುಟ್ಟುಹೋಗಿದ್ದಾರೆ.

ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಸ್ಫೋಟ ಸಂಭವಿಸಿದ ವೇಳೆಗೆ ಕಾರ್ಖಾನೆಯಲ್ಲಿ 30 ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಏಕಾಏಕಿ ಉಂಟಾದ ಭಾರಿ ಸ್ಫೋಟದ ಪರಿಣಾಮವಾಗಿ ಕಟ್ಟಡದ ಭಾಗಗಳು ಚಿಂದಿಯಾಗಿದ್ದು, ಮೃತದೇಹಗಳು ಹತ್ತಿರದ ಹೊಲಗಳಿಗೆ ಹಾರಿವೆ ಎಂದು ಸ್ಥಳೀಯರು ಹೇಳಿಕೆ ನೀಡಿದ್ದಾರೆ. ಸ್ಫೋಟದ ತೀವ್ರತೆಯಿಂದ ಕೆಲವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೂ ಕೆಲವರು ಬೆಂಕಿಗೆ ಆಹುತಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ತಕ್ಷಣವೇ ಆಂಬ್ಯುಲೆನ್ಸ್ಗಳು ಹಾಗೂ ಅಗ್ನಿಶಾಮಕ ದಳದ ವಾಹನಗಳು ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಜಿಲ್ಲಾಡಳಿತ ಪರಿಹಾರ ಮತ್ತು ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ.

ಈ ದುರಂತದ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಖುದ್ದಾಗಿ ಮಾಹಿತಿ ಪಡೆದುಕೊಂಡಿದ್ದು, ಸ್ಥಳೀಯ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಗೆ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ನೆರವು ಕಾರ್ಯಗಳನ್ನು ವೇಗಗೊಳಿಸಲು ಸೂಚನೆ ನೀಡಿದ್ದಾರೆ. ಮೃತರ ಕುಟುಂಬಗಳಿಗೆ ಅಗತ್ಯ ಸಹಾಯ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಸ್ಫೋಟದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande