
ಬೆಂಗಳೂರು, 03 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಸಾಮಾಜಿಕ ಅಸಮಾನತೆ ಹಾಗೂ ಜಾತಿ ಶೋಷಣೆ ಎಂಬ ಸಂವೇದನಾಶೀಲ ವಿಷಯಗಳನ್ನು ಕೇಂದ್ರವಾಗಿಸಿಕೊಂಡು ನಿರ್ಮಿಸಲಾದ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಕನ್ನಡ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ನಿರ್ಮಿತವಾಗಿರುವ ಈ ಚಿತ್ರವು ಸಮಾನತೆ, ನ್ಯಾಯ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ ಎಂಬ ಹಿನ್ನೆಲೆಯಲ್ಲೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಕುರಿತು ಅಗತ್ಯ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa