ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ; ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ
ಬೆಂಗಳೂರು, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮತ್ತು ಕಮಿಷನ್ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ವಿಧಾನ ಸಭೆ ಅಧಿವೇಶನದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ತಮ್ಮ ಆರೋಪಗಳಿಗೆ ಸಂಬಂಧಿಸಿದಂತೆ ದಾ
Ashok


ಬೆಂಗಳೂರು, 03 ಫೆಬ್ರವರಿ (ಹಿ.ಸ.) :

ಆ್ಯಂಕರ್ : ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮತ್ತು ಕಮಿಷನ್ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ವಿಧಾನ ಸಭೆ ಅಧಿವೇಶನದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ತಮ್ಮ ಆರೋಪಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸದನದ ಮುಂದಿಟ್ಟ ಅವರು, ಅಬಕಾರಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಂಪೂರ್ಣ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಅಬಕಾರಿ ಇಲಾಖೆಯಲ್ಲಿ ಪರವಾನಗಿ, ವರ್ಗಾವಣೆ ಹಾಗೂ ಇತರೆ ಆಡಳಿತಾತ್ಮಕ ವಿಷಯಗಳಲ್ಲಿ ದೊಡ್ಡ ಮಟ್ಟದ ಕಮಿಷನ್ ವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿದ ಆರ್.ಅಶೋಕ್, ಈ ಭ್ರಷ್ಟಾಚಾರಕ್ಕೆ ನೇರವಾಗಿ ಸಚಿವರೇ ಹೊಣೆಗಾರರು ಎಂದು ಹೇಳಿದರು. ಸರ್ಕಾರ ಭ್ರಷ್ಟಾಚಾರವನ್ನು ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.

ಇದೇ ವೇಳೆ, ಸರ್ಕಾರಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ ಈ ಕೂಡಲೇ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

ಭ್ರಷ್ಟಾಚಾರದ ಆರೋಪಗಳು ಗಂಭೀರವಾಗಿರುವ ಹಿನ್ನೆಲೆಯಲ್ಲಿ ಸಚಿವರನ್ನು ಮುಂದುವರಿಸುವುದು ಸರ್ಕಾರದ ನೈತಿಕ ವಿಫಲತೆಯನ್ನು ತೋರಿಸುತ್ತದೆ ಎಂದು ಅವರು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande