ಫೆ ೬ ಮತ್ತು೭ ರಂದು ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ
ಫೆ ೬ ಮತ್ತು೭ ರಂದು ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ
ಅಜಯ್ ಕುಮಾರ್


ಕೋಲಾರ, ೦೩ ಫೆಬ್ರವರಿ (ಹಿ.ಸ) :

ಆಂಕರ್ : ಜಿಲ್ಲಾಡಳಿತ ಹಾಗೂ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಫೆ ೬ ಮತ್ತು೭ ರಂದು ಎರಡು ದಿನಗಳ ಕಾಲ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ನಡೆಯಲಿವೆ ಎಂದು ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಅಜಯ್ ಕುಮಾರ್ ತಿಳಿಸಿದ್ದಾರೆ

ಕ್ರೀಡಾಕೂಟ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿದ ಅವರು ಜಿಲ್ಲೆಯ ಸರ್ಕಾರಿ ನೌಕರರು ಸ್ಪರ್ಧೆಗಳಲ್ಲಿ ಭಾಗವಹಿಸಲು ನೇರವಾಗಿ ನೋಂದಣಿಗೆ ಅವಕಾಶ ನೀಡಲಾಗಿದೆ ಫೆ ೬ ರಂದು ಬೆಳಗ್ಗೆ ೮:೩೦ ರಿಂದ ೯:೩೦ ರ ವರಗೆ ಕ್ರೀಡಾಂಗಣದಲ್ಲಿಯೇ ನೋಂದಣಿಗೆ ಅವಕಾಶ ಮಾಡಲಾಗಿದೆ ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ಟೀ ಶರ್ಟ್ ಮತ್ತು ಕ್ಯಾಪ್ ವಿತರಿಸಲಾಗುತ್ತದೆ. ನೌಕರರು ಕಡ್ಡಾಯವಾಗಿ ತಮ್ಮ ಇಲಾಖೆಯ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ತರಬೇಕು. ನೋಂದಣಿ ಮಾಡಿಕೊಂಡವರಿಗೆ ಮಾತ್ರ ಎರಡು ದಿನ ವಿಶೇಷ ರಜೆ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದರು.

ಕ್ರೀಡಾಕೂಟಕ್ಕೆ ಫೆ.೬ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಚಾಲನೆ ನೀಡಲಿದ್ದಾರೆ ಶಾಸಕ ಕೊತ್ತೂರು ಮಂಜುನಾಥ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.

ಚಿತ್ರ : ಅಜಯ್ ಕುಮಾರ್

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande