ಜಾಜ್‌ಪುರದ ಬಿರಾಜ ದೇವಸ್ಥಾನದಲ್ಲಿ ರಾಷ್ಟ್ರಪತಿ ಮುರ್ಮು ಪ್ರಾರ್ಥನೆ
ಭುವನೇಶ್ವರ, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಒಡಿಶಾದ ಜಾಜ್‌ಪುರ ಜಿಲ್ಲೆಯ ಪವಿತ್ರ ಮಾ ಬಿರಾಜ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬೆಳಿಗ್ಗೆ ಭುವನೇಶ್ವರದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಜಾಜ್‌ಪುರಕ್ಕೆ ಆಗಮಿಸಿದ ರಾಷ್ಟ್
President


ಭುವನೇಶ್ವರ, 03 ಫೆಬ್ರವರಿ (ಹಿ.ಸ.) :

ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಒಡಿಶಾದ ಜಾಜ್‌ಪುರ ಜಿಲ್ಲೆಯ ಪವಿತ್ರ ಮಾ ಬಿರಾಜ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬೆಳಿಗ್ಗೆ ಭುವನೇಶ್ವರದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಜಾಜ್‌ಪುರಕ್ಕೆ ಆಗಮಿಸಿದ ರಾಷ್ಟ್ರಪತಿಗಳು, ದೇವಾಲಯ ಸಂಕೀರ್ಣದೊಳಗೆ ಇರುವ ನಾಭಿ ಗಯಾದಲ್ಲಿ ಪಿಂಡ ದಾನ ವಿಧಿಯನ್ನು ನೆರವೇರಿಸಿದರು.

ನಾಭಿ ಗಯಾವನ್ನು ಪೂರ್ವಜರ ಶ್ರಾದ್ಧ ಮತ್ತು ವಿಧಿ ವಿಧಾನಗಳಿಗೆ ಸಂಬಂಧಿಸಿದ ಅತ್ಯಂತ ಪವಿತ್ರ ಸ್ಥಳವೆಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಮುರ್ಮು ಅವರು ಪರಂಪರಾಗತ ಆಚರಣೆಗಳೊಂದಿಗೆ ಪೂಜಾ ವಿಧಿಗಳನ್ನು ನೆರವೇರಿಸಿದರು.

ರಾಷ್ಟ್ರಪತಿಗಳ ಭೇಟಿಯ ಹಿನ್ನೆಲೆ ದೇವಾಲಯ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕಠಿಣ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿತ್ತು. ದೇವಾಲಯ ಸಂಕೀರ್ಣವನ್ನು ಸಂಪೂರ್ಣವಾಗಿ ಬ್ಯಾರಿಕೇಡ್ ಮಾಡಲಾಗಿದ್ದು, ಪೊಲೀಸ್ ಮತ್ತು ಭದ್ರತಾ ಪಡೆಗಳ ಕಟ್ಟುನಿಟ್ಟಿನ ನಿಗಾವಹಣೆ ಇತ್ತು.

ದೇವಾಲಯ ದರ್ಶನ ಮತ್ತು ವಿಧಿ ವಿಧಾನಗಳನ್ನು ಪೂರ್ಣಗೊಳಿಸಿದ ಬಳಿಕ, ರಾಷ್ಟ್ರಪತಿ ಮುರ್ಮು ಅವರು ಬಾಲಸೋರ್‌ಗೆ ತೆರಳಲಿದ್ದು, ಅಲ್ಲಿ ಫಕೀರ್ ಮೋಹನ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ ಪುರಿಗೆ ತೆರಳಿ ಶ್ರೀ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡುವ ಕಾರ್ಯಕ್ರಮವೂ ಅವರ ವೇಳಾಪಟ್ಟಿಯಲ್ಲಿ ಇದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande