
ಗದಗ, 03 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ 16ನೇ ದಿನಕ್ಕೆ ಕಾಲಿಟ್ಟಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಪುರಾತತ್ವ ಇಲಾಖೆಯ ನೇತೃತ್ವದಲ್ಲಿ ಉತ್ಖನನ ನಡೆಯುತ್ತಿದೆ. ಸುಮಾರು 35 ಕಾರ್ಮಿಕರು ನಾಲ್ಕು ಬಾಕ್ಸ್‌ಗಳಲ್ಲಿ ಸೂಕ್ಷ್ಮವಾಗಿ ಉತ್ಖನನ ಕಾರ್ಯದಲ್ಲಿ ತೊಡಗಿದ್ದಾರೆ.
ಉತ್ಖನನ ವೇಳೆ ಪುರಾತನ ಕಾಲದ ಗೋಡೆಯ ಪಾಯ ಪತ್ತೆಯಾಗಿದ್ದು, ಸ್ಥಳದಲ್ಲಿ ಕುತೂಹಲ ಮೂಡಿಸಿದೆ. ನಾಲ್ಕು ಗೋಡೆಯ ಮಧ್ಯದ ಮಣ್ಣು ಸಂಪೂರ್ಣ ತೆರವು ಮಾಡಿದ ಬಳಿಕ ಇನ್ನಷ್ಟು ಪ್ರಾಚ್ಯಾವಶೇಷಗಳು ಸಿಗುವ ನಿರೀಕ್ಷೆ ವ್ಯಕ್ತವಾಗಿದೆ. ಪುರಾತತ್ವ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಮಾರ್ಗದರ್ಶನದಲ್ಲಿ ಉತ್ಖನನ ಕಾರ್ಯ ಮುಂದುವರಿದಿದೆ.
ಲಕ್ಕುಂಡಿಯ ಇತಿಹಾಸದ ಹೊಸ ಅಧ್ಯಾಯ ತೆರೆದಿಡುವ ಸಾಧ್ಯತೆಗಳತ್ತ ಜನರ ಗಮನ ಸೆಳೆಯುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / lalita MP