
ಗದಗ, 03 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯ ನರಗುಂದ ತಾಲೂಕಿನ ಕಲಕೇರಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದ್ದು, ಹಳೆಯ ಮನೆಯ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಯಲ್ಲಪ್ಪ ಕೆಳಗೇರಿ ಅವರಿಗೆ ಸೇರಿದ ಹಳೆಯ ಮನೆಯ ಗೋಡೆ ತೆರವು ಮಾಡುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಗೋಡೆ ತೆರವು ಕಾರ್ಯ ನಡೆಯುತ್ತಿದ್ದಾಗ ಏಕಾಏಕಿ ಗೋಡೆ ಕುಸಿದು ನಾಲ್ವರು ಕಾರ್ಮಿಕರ ಮೇಲೆ ಬಿದ್ದಿದೆ. ಮಣ್ಣಿನ ಅವಶೇಷಗಳಡಿ ಸಿಲುಕಿದ ಪರಿಣಾಮ ನಾಗಪ್ಪ ದೊಡ್ಡಮನಿ (60) ಹಾಗೂ ಶೇಖಪ್ಪ ಪರಸಪ್ಪನವರ್ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರು ಕಾರ್ಮಿಕರನ್ನು ತಕ್ಷಣ ನರಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ಮಾಹಿತಿ ಪಡೆದ ತಕ್ಷಣ ನರಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಘಟನೆಯಿಂದ ಕಲಕೇರಿ ಗ್ರಾಮದಲ್ಲಿ ಶೋಕದ ವಾತಾವರಣ ಉಂಟಾಗಿದೆ.
ಹಿಂದೂಸ್ತಾನ್ ಸಮಾಚಾರ್ / lalita MP