
ಗದಗ, 03 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಭಾರತ ಸರ್ಕಾರದ ವಿಶ್ವಬ್ಯಾಂಕ್ ನೆರವಿನೊಂದಿಗೆ ಅನುಷ್ಠಾನಗೊಳಿಸಲಾಗುತ್ತಿರುವ ಬ್ಯಾಂಕ ಅಧಿಕಾರಿಗಳು ಹಾಗೂ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಾರ್ಯಕ್ರಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸಲು ಯೋಜನೆಯಡಿಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಗದಗ ಹಾಗೂ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಮನಿಕೇಶನ್ & ಅಡ್ವರ್ಟೆಜಿಂಗ್ ಲಿ.ಬೆಂಗಳೂರ ಇವರ ಸಹಯೋಗದಲ್ಲಿ ಗದಗ ಬೆಟಗೇರಿಯ ನರಸಾಪುರ ರಸ್ತೆಯ ಶಿವರತ್ನಾ ಪ್ಯಾಲೇಸ್ ದಲ್ಲಿ ಯಶಸ್ವಿಯಾಗಿ ಜರುಗಿಸಲಾಯಿತು.
ಈ ಕಾರ್ಯಾಗಾರದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಪ್ರಶಾಂತ ಪಿ. ಬಾರಿಗಿಡದ, ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗದ ಉಪನಿರ್ದೇಶಕ ಅಜಿತ ನಾಯಕ ಹಾಗೂ ಬ್ಯಾಂಕ ಅಧಿಕಾರಿಗಳು ಹಾಗೂ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ಎಸ್.ಎಸ್.ಮೂರ್ತಿ ಬೆಂಗಳೂರ ಇವರು ಕುರಿತಂತೆ ಪಿ.ಪಿ.ಟಿ ಪುಜೆಂಟಿಷನ್ ಮೂಲಕ ಉಪನ್ಯಾಸ ನೀಡಿದರು. ಸದರಿ ಕಾರ್ಯಾಗಾರದಲ್ಲಿ ಗದಗ ಜಿಲ್ಲೆಯ ಎಲ್ಲಾ ಬ್ಯಾಂಕ ಅಧಿಕಾರಿಗಳು ಹಾಗೂ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿ ಕಾರ್ಯಾಗಾರವನ್ನು ಯಶ್ವಸಿಗೊಳಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / lalita MP