ಫೆಬ್ರವರಿ ೬ರಂದು ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ
ಫೆಬ್ರವರಿ ೬ರಂದು ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ
ಫೆಬ್ರವರಿ ೬ ರಂದು ಕೋಲಾರದಲ್ಲಿ ನಡೆಯಲಿರುವ ಗ್ಯಾರಂಟಿ ಯೋಜನೆಯ ಕಾರ್ಯಾಗಾರದ ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಉದ್ಘಾಟಿಸಿದರು.


ಕೋಲಾರ, ೦೩ ಫೆಬ್ರವರಿ (ಹಿ.ಸ) :

ಆ್ಯಂಕರ್ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ ಮತ್ತು ಉತ್ಸವವನ್ನು ಫೆಬ್ರವರಿ ೬ ರಂದು ಆಯೋಜಿಸಲಾಗಿದ್ದು, ಕಾರ್ಯಕ್ರಮ ಯಶಸ್ವಿಗೆ ಎಲ್ಲಾ ಅಧಿಕಾರಿಗಳು ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿಗಳಾದ ಎಂ.ಆರ್.ರವಿ ತಿಳಿಸಿದರು

ಕೋಲಾರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ಭೈರತಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆದಯಲಿದ್ದು, ಸದರಿ ಕಾರ್ಯಕ್ರಮ ಯಶಸ್ವಿಗೆ ಎಲ್ಲಾ ಅಧಿಕಾರಿಗಳು ಶ್ರಮಿಸಬೇಕು ಎಂದರು.

ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾಮಟ್ಟದ ಗ್ಯಾರಂಟಿ ಕಾರ್ಯಾಗಾರ ಹಾಗೂ ಉತ್ಸವವನ್ನು ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಗ್ಯಾರಂಟಿ ಉತ್ಸವ ಕಾರ್ಯಕ್ರಮವನ್ನು ನಡೆಸಲು ಉದ್ದೇಶಿಸಲಾಗಿದೆ. ಸದರಿ ಕಾರ್ಯಾಗಾರವನ್ನು ವ್ಯವಸ್ಥಿತವಾಗಿ ಹಾಗೂ ಅಗತ್ಯ ಶಿಷ್ಟಾಚಾರದೊಂದಿಗೆ ಆಯೋಜಿಸಿ, ಯಶಸ್ವಿಗೊಳಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ಪ್ರತಿಯೊಂದು ಸಮಿತಿಗೂ ನಿರ್ಧಿಷ್ಟ ಕಾರ್ಯಗಳನ್ನು ಜವಾಬ್ದಾರಿಗಳನ್ನು ವಹಿಸಲಾಗಿದೆ.

ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಹಾಗೂ ಯಶಸ್ವಿಗೊಳಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳ ಸಮಿತಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಎಲ್ಲಾ ಅಧಿಕಾರಿಗಳು ಶಿಷ್ಠಾಚಾರದಲ್ಲಿ ಯಾವುದೇ ಲೋಪವಾಗದಂತೆ ಹಾಗೂ ತಮಗೆ ಸೂಚಿಸಿದ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸಬೇಕು. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಸರಿಯಾದ ಸಮಯಕ್ಕೆ ತರೆತರಲು ಸಾರಿಗೆ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದರು.

ಕಾರ್ಯಗಾರಕ್ಕೆ ಜಿಲ್ಲೆಯ ಜನಪದ ಕಲಾ ತಂಡಗಳಿ0ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಕಾರ್ಯಕ್ರಮದ ಅಂಗವಾಗಿ ಜಿಲ್ಲೆ ಮತ್ತು ತಾಲ್ಲೂಕುವಾರು, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಯಶೋಗಾಥೆಗಳ ಕಿರುಹೊತ್ತಿಗೆ, ಗ್ಯಾರೆಂಟಿ ಯೋಜನೆಗಳ ಬೀದಿ ನಾಟಕ ಪ್ರದರ್ಶನ ಹಾಗೂ ವಿಡಿಯೊ ಸಾಕ್ಷ್ಯ ಚಿತ್ರಗಳ ಮೂಲಕ ಕಾರ್ಯಾಗಾರದ ಸಭೆಯಲ್ಲಿ ಪ್ರದರ್ಶಿಸಲು ಅನುಷ್ಠಾನ ಇಲಾಖೆ ಅಧಿಕಾರಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪಲು ಎಲ್ಲಾ ಇಲಾಖೆಗಳು ಮಾಹಿತಿ ಕೇಂದ್ರಗಳನ್ನು ತೆರೆಯಬೇಕು. ಶಿಷ್ಠಾಚಾರದಂತೆ ಗಣ್ಯರಿಗೆ ವೇದಿಕೆಯಲ್ಲಿ ಆಸನ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಹಾಗೂ ಅನುಷ್ಠಾನ ಅಧ್ಯಕ್ಷರು ರಾಜ್ಯ ಉಪಾಧ್ಯಕ್ಷರುಗಳನ್ನು ಹಾಗೂ ಜಿಲ್ಲೆಯ ಎಲ್ಲಾ ಜನಪ್ರತಿನಿಧಿ ಗಳು ಸೇರಿದಂತೆ ಜಿಲ್ಲಾ ಹಾಗೂ ಎಲ್ಲಾ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರನ್ನು ಅಧಿಕೃತವಾಗಿ ಆಹ್ವಾನಿಸಬೇಕು. ಈ ಕಾರ್ಯಕ್ರಮ ಆಯೋಜಿಸುವ ಸಂಬ0ಧ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜನರಿಗೆ ಆಸನ, ಕುಡಿಯುವ ನೀರು, ಆಹಾರ, ಸಾರಿಗೆ, ವೇದಿಕೆ ಹೂವಿನ ಅಲಂಕಾರ, ಪ್ರದರ್ಶನ ಮಳಿಗೆ ಸ್ಥಾಪನೆ ಹಾಗೂ ಇನ್ನಿತರ ವ್ಯವಸ್ಥೆಗಳನ್ನು ವ್ಯವಸ್ಥಿತವಾಗಿ ಮಾಡುವಂತೆ ಸಂಬ0ಧಪಟ್ಟವರಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಪ್ರವೀಣ್.ಪಿ ಬಾಗೇವಾಡಿ, ಅಪರ ಜಿಲ್ಲಾಧಿಕಾರಿಗಳಾದ ಎಸ್.ಎಂ. ಮಂಗಳ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಚಿತ್ರ : ಫೆಬ್ರವರಿ ೬ ರಂದು ಕೋಲಾರದಲ್ಲಿ ನಡೆಯಲಿರುವ ಗ್ಯಾರಂಟಿ ಯೋಜನೆಯ ಕಾರ್ಯಾಗಾರದ ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಉದ್ಘಾಟಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande