
ಶಿಲ್ಲಾಂಗ್, 05 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಮೇಘಾಲಯದ ಪೂರ್ವ ಜೈಂಟಿಯಾ ಹಿಲ್ಸ್ ಜಿಲ್ಲೆಯ ತಾಷ್ಖೈನಲ್ಲಿರುವ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಸಂಜೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯ ನಂತರ ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಸ್ಥಳದಲ್ಲಿ ಇನ್ನೂ ಅನೇಕ ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಗುವಾಹಟಿಯಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಮೂರು NDRF ತಂಡಗಳು ಸ್ಥಳಕ್ಕೆ ತೆರಳಿವೆ. ಘಟನಾ ಸ್ಥಳದ ವೀಡಿಯೋ ತುಣುಕುಗಳು ಕಾರ್ಮಿಕರು ಅಳುತ್ತಾ, ಕಿರುಚುತ್ತಾ ಸಿಲುಕಿರುವ ದೃಶ್ಯಗಳನ್ನು ಬಹಿರಂಗಪಡಿಸುತ್ತವೆ. ಪ್ರಾಥಮಿಕ ವರದಿ ಪ್ರಕಾರ, ಗಣಿಯೊಳಗೆ ಡೈನಮೈಟ್ ಬಳಕೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಮೃತರಲ್ಲಿ ಮೂವರು ಕಾರ್ಮಿಕರನ್ನು ಅಸ್ಸಾಂನ ವಿವಿಧ ಜಿಲ್ಲೆಗಳ ನಿವಾಸಿಗಳಾದ ಫಾರೂಕ್ ಅಹ್ಮದ್, ದಿಲ್ದಾರ್ ಹುಸೇನ್ ಮತ್ತು ಅನ್ವರ್ ಹುಸೇನ್ ಎಂದು ಗುರುತಿಸಲಾಗಿದೆ. ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಘಟನಾ ಸ್ಥಳದಲ್ಲಿದ್ದು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇನ್ನೂ ಶವಗಳು ಗಣಿಯೊಳಗೆ ಸಿಲುಕಿರುವ ಸಂಭವವಿದೆ. ರಕ್ಷಣಾ ಕಾರ್ಯಾಚರಣೆ ಯುದ್ಧೋಪಾದಿಯಲ್ಲಿ ನಡೆಯುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa