ನೇಪಾಳ : ಪ್ರಧಾನಿ ಅಭ್ಯರ್ಥಿ ಬಾಲೆನ್ ಶಾ ಸಂಪರ್ಕ ಕಚೇರಿ ಧ್ವಂಸ
ಕಠ್ಮಂಡು, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ)ದ ಹಿರಿಯ ನಾಯಕ ಹಾಗೂ ಪ್ರಧಾನಿ ಅಭ್ಯರ್ಥಿ ಬಾಲೆನ್ ಶಾ ಅವರ ಚುನಾವಣಾ ಸಂಪರ್ಕ ಕಚೇರಿಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವ ಘಟನೆ ಝಾಪಾ ಜಿಲ್ಲೆಯಲ್ಲಿ ವರದಿಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಝಾಪ
Nepal


ಕಠ್ಮಂಡು, 05 ಫೆಬ್ರವರಿ (ಹಿ.ಸ.) :

ಆ್ಯಂಕರ್ : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ)ದ ಹಿರಿಯ ನಾಯಕ ಹಾಗೂ ಪ್ರಧಾನಿ ಅಭ್ಯರ್ಥಿ ಬಾಲೆನ್ ಶಾ ಅವರ ಚುನಾವಣಾ ಸಂಪರ್ಕ ಕಚೇರಿಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವ ಘಟನೆ ಝಾಪಾ ಜಿಲ್ಲೆಯಲ್ಲಿ ವರದಿಯಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಝಾಪಾ ಜಿಲ್ಲೆಯ ಕಮಲ್ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ಝಾಪಾ–5 ವಿಧಾನ ಸಭಾ ಕ್ಷೇತ್ರದ ಚುನಾವಣಾ ಸಂಪರ್ಕ ಕಚೇರಿಯ ಕಟ್ಟಡದ ಕಿಟಕಿ ಗಾಜುಗಳನ್ನು ಅಪರಿಚಿತ ದುಷ್ಕರ್ಮಿಗಳು ಒಡೆದಿದ್ದಾರೆ. ಘಟನೆ ಕುರಿತು ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಝಾಪಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಸಂಧರಾ ಖಡ್ಕಾ ಮಾತನಾಡಿ, “ಚುನಾವಣಾ ಸಂಪರ್ಕ ಕಚೇರಿಯ ಕಿಟಕಿ ಗಾಜುಗಳು ಮುರಿದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಪ್ರಕರಣ ಸಂಬಂಧ ತನಿಖೆ ಆರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

ಗಮನಾರ್ಹವಾಗಿ, ಆರ್‌ಎಸ್‌ಪಿ ಹಿರಿಯ ನಾಯಕ ಬಾಲೆನ್ ಶಾ ಅವರು ಝಾಪಾ ಕ್ಷೇತ್ರ ಸಂಖ್ಯೆ–5ರಿಂದ ಸ್ಪರ್ಧಿಸುತ್ತಿದ್ದು, ಇದೇ ಕ್ಷೇತ್ರದಿಂದ ನೇಪಾಳದ ಪ್ರಮುಖ ರಾಜಕೀಯ ನಾಯಕ ಹಾಗೂ ಸಿಪಿಎನ್–ಯುಎಂಎಲ್ ಅಧ್ಯಕ್ಷ ಕೆ.ಪಿ. ಶರ್ಮಾ ಓಲಿ ಕೂಡ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಈ ಕ್ಷೇತ್ರವನ್ನು ಅತ್ಯಂತ ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಪತ್ತೆಗಾಗಿ ತನಿಖೆ ತೀವ್ರಗೊಳಿಸಲಾಗಿದ್ದು, ಚುನಾವಣಾ ಪ್ರಕ್ರಿಯೆಗೆ ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande