ಕೋಲಾರದಲ್ಲಿ ಫೆಬ್ರವರಿ ೬,೭ ರಂದು ಎರಡು ದಿನಗಳ ಕಾಲ ಸರ್ಕಾರಿ ನೌಕರರ ಕ್ರೀಡಾಕೂಟ
ಕೋಲಾರದಲ್ಲಿ ಫೆಬ್ರವರಿ ೬,೭ ರಂದು ಎರಡು ದಿನಗಳ ಕಾಲ ಸರ್ಕಾರಿ ನೌಕರರ ಕ್ರೀಡಾಕೂಟ
ಕೋಲಾರದಲ್ಲಿ ನಡೆಯಲಿರುವ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟದ ಸಿದ್ದತೆಯನ್ನು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಜಯ್ ಪರಿಶೀಲಿಸಿದರು.


ಕೋಲಾರ, ೦೫ ಫೆಬ್ರವರಿ (ಹಿ.ಸ) :

ಆ್ಯಂಕರ್ : ಜಿಲ್ಲಾಡಳಿತ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ನಗರದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಅಗತ್ಯವಿರುವ ಮೈದಾನದ ವ್ಯವಸ್ಥೆ, ಕ್ರೀಡಾಪಟುಗಳಿಗೆ ವಸತಿ ಸೇರಿದಂತೆ ಮತ್ತಿತರ ಸೌಲಭ್ಯಗಳ ಬಗ್ಗೆ ಪರಿಶೀಲನೆಯನ್ನು ಜಿಲ್ಲಾ ಸಂಘದ ಅಧ್ಯಕ್ಷ ಎ.ಅಜಯ್ ಕುಮಾರ್ ನೇತೃತ್ವದಲ್ಲಿ ಗುರುವಾರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಿದರು.

ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎ.ಅಜಯ್ ಕುಮಾರ್ ಮಾತನಾಡಿ ಫೆ ೬ ಮತ್ತು ೭ ರಂದು ಎರಡು ದಿನಗಳ ಕಾಲ ನಡೆಯಲಿರುವ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸುಮಾರು ೨೦೦೦ ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದು, ಕ್ರೀಡಾ ಚಟುವಟಿಕೆಗಳು ಶಿಸ್ತು ಬದ್ಧವಾಗಿ ನಡೆಸಲು ಯೋಜನೆಗಳನ್ನು ರೂಪಿಸಿಕೊಂಡು ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದರು.

ಕ್ರೀಡಾಕೂಟದಲ್ಲಿ ಸ್ಪರ್ಧಿಸಲು ತಾಲೂಕುಗಳ ವಿವಿಧ ಕ್ರೀಡಾಪಟುಗಳಿಗೆ, ತೀರ್ಪುಗಾರರಿಗೆ ಹಾಗೂ ಅಧಿಕಾರಿಗಳು ಸೇರಿದಂತೆ ಮತ್ತಿತರರು ಆಗಮಿಸಲಿದ್ದು, ಇವರುಗಳಿಗೆಲ್ಲಾ ಉಳಿಯಲು ವಸತಿ ಸೌಕರ್ಯ, ಊಟೋಪಚಾರದ ವ್ಯವಸ್ಥೆ, ಸಾರಿಗೆ ವ್ಯವಸ್ಥೆ ಸೇರಿದಂತೆ ಮತ್ತಿತರ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಳ್ಳಬೇಕು ಸಮಿತಿಗಳಿಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ಮಾಡಬೇಕು ಎಂದು ತಿಳಿಸಿದರು.

ಫೆ ೬ ರಂದು ಬೆಳಗ್ಗೆ ೧೦ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಮಾಡಲಿದ್ದು ಫೆ ೭ ರಂದು ಮಧ್ಯಾಹ ೩ ಗಂಟೆಗೆ ನಗರದ ಸುವರ್ಣ ಕನ್ನಡ ಭವನದಲ್ಲಿ ಸರ್ಕಾರಿ ನೌಕರರ ಸರ್ವ ಸದಸ್ಯರ ಸಭೆಯನ್ನು ಅಪರ ಜಿಲ್ಲಾಧಿಕಾರಿ ಎಂ.ಎಸ್ ಮಂಗಳಾ ಉದ್ಘಾಟನೆ ನೆರವೇರಿಸಲಿದ್ದಾರೆ ನಂತರ ೩.೩೦ ಕ್ಕೆ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಲಿದೆ ಎಂದು ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾ ಗೌರವ ಅಧ್ಯಕ್ಷ ಕೆ.ಎನ್ ಮಂಜುನಾಥ್, ರಾಜ್ಯ ಪರಿಷತ್ ಸದಸ್ಯ ಶ್ರೀನಿವಾಸರೆಡ್ಡಿ, ಖಜಾಂಚಿ ಸತೀಶ್, ಪದಾಧಿಕಾರಿಗಳಾದ ರಾಜೇಂದ್ರ ಪ್ರಸಾದ್, ವಿಜಯ್, ಮುಂತಾದವರು ಇದ್ದರು.

ಚಿತ್ರ : ಕೋಲಾರದಲ್ಲಿ ನಡೆಯಲಿರುವ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟದ ಸಿದ್ದತೆಯನ್ನು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಜಯ್ ಪರಿಶೀಲಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande