ಪಂಚ ದೇವಾಲಯಗಳ ಮತ್ತು ಪಂಚ ಬಾವಿಗಳ ಅನಾವರಣ
ಗದಗ, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಮತ್ತು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇವರುಗಳ ಸಹಯೋಗದಲ್ಲಿ ಫೆಬ್ರುವರಿ 06 ರಂದು ಬೆಳಿಗ್ಗೆ 10.30 ಗಂಟೆಗೆ
ಫೋಟೋ


ಗದಗ, 05 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಮತ್ತು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇವರುಗಳ ಸಹಯೋಗದಲ್ಲಿ ಫೆಬ್ರುವರಿ 06 ರಂದು ಬೆಳಿಗ್ಗೆ 10.30 ಗಂಟೆಗೆ ಚೌಕಿಮಠದ ಆವರಣ ಲಕ್ಕುಂಡಿಯಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಧಿಕಾರ ವ್ಯಾಪ್ತಿಯಲ್ಲಿ ಪಂಚ ದೇವಾಲಯಗಳ ಮತ್ತು ಪಂಚ ಬಾವಿಗಳ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಕಾರ್ಯಕ್ರಮವನ್ನು ಅನಾವರಣಗೋಲಿಸುತ್ತಾರೆ. ನರಗುಂದ ಶಾಸಕ ಸಿ.ಸಿ.ಪಾಟೀಲ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಹಾಗೂ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ , ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ, ಹಾವೇರಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ.ಗದ್ದಿಗೌಡರ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾದ ಅಧ್ಯಕ್ಷ ಬಿ.ಬಿ.ಅಸೂಟಿ ಆಗಮಿಸುವರು.

ವಿಶೇಷ ಆಹ್ವಾನಿತರಾಗಿ ಸರ್ಕಾರದ ಕಾರ್ಯದರ್ಶಿಗಳು, ಪ್ರವಾಸೋದ್ಯಮ ಇಲಾಖೆಯ ಡಾ.ಕೆ.ವಿ.ತ್ರಿಲೋಕಚಂದ್ರ, ಯೋಜನೆ ಕಾರ್ಯಕ್ರಮಗಳು, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಕಾರ್ಯದರ್ಶಿಗಳು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಪ್ರವಾಸೋದ್ಯಮ ಇಲಾಖೆ ಆಯುಕ್ತರು ಅಕ್ರಂ ಪಾಷಾ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಶ್ರೀಮತಿ ಜಾನಕಿ ಕೆ.ಎಂ, ಆಗಮಿಸಲಿದ್ದಾರೆ.

ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ರಾಜ್ಯ ಸಮಿತಿ ಸದಸ್ಯರಾದ ಸಿ.ಜಿ.ಬೆಟಸೂರಮಠ, ಸಿದ್ದಲಿಂಗೇಶ್ವರ ಎಚ್.ಪಾಟೀಲ, ಶ್ರೀಮತಿ ಗೀತಾಂಜಲಿ ರಾವ್, ಅ.ಧ.ಕಟ್ಟಿಮನಿ,ಲಕ್ಕುಂಡಿ ಗ್ರಾಮದ ಗುರು-ಹಿರಿಯರು ಆಗಮಿಸಲಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾದಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೊಲೀಸ ವರಿಷ್ಟಾದಿಕಾರಿ ರೋಹನ್ ಜಗದೀಶ್, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಯುಕ್ತರು ದೇವರಾಜು ಎ. ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ದಿ ಪ್ರಾಧಿಕಾರ ಆಯುಕ್ತರು ಡಾ.ಶರಣು ಗೋಗೇರಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೆಶಕರು ಕೊಟ್ರೇಶ್ವರ ಯ.ವಿಭೂತಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande