ಸಿಂಗೊ0ಡಹಳ್ಳಿಯಲ್ಲಿ ಗ್ರಂಥಾಲಯ ಉದ್ಘಾಟನೆ
ಸಿಂಗೊ0ಡಹಳ್ಳಿಯಲ್ಲಿ ಗ್ರಂಥಾಲಯ ಉದ್ಘಾಟನೆ
ಕೋಲಾರ ತಾಲ್ಲೂಕಿನ ಸಿಂಗೊ0ಡಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಗ್ರಂಥಾಲಯ ಆರಂಭಗೊ0ಡಿತು.


ಕೋಲಾರ, ೦೫ ಫೆಬ್ರವರಿ (ಹಿ.ಸ) :

ಆ್ಯಂಕರ್ : ಗ್ರಂಥಾಲಯಗಳು ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಜ್ಞಾನವನ್ನು ವೃದ್ಧಿಸುವ ಕೇಂದ್ರಗಳಾಗಿದ್ದು ಪ್ರತಿಯೊಬ್ಬರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಗ್ರಂಥಾಲಯ ಮೇಲ್ವಿಚಾರಕಿ ಪ್ರ|ಭಾವತಿ ತಿಳಿಸಿದರು.

ತಾಲ್ಲೂಕಿನ ಸಿಂಗೊAಡಹಳ್ಳಿ ಗ್ರಾಮದಲ್ಲಿ ಬೆಗ್ಲಿಹೊಸಹಳ್ಳಿ ಗ್ರಾಮಪಂಚಾಯಿತಿ ಮತ್ತು ಗ್ರಾಮಸ್ಥರ ಸಹಹೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನ ಗ್ರಾಮ ಗ್ರಂಥಾಲಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಗ್ರಂಥಾಲಯಗಳು ಅತಿ ಮುಖ್ಯವಾಗಿವೆ. ಈ ಗ್ರಂಥಾಲಯದಲ್ಲಿ ಸುಮಾರು ೫ ಸಾವಿರಕ್ಕೂ ಹೆಚ್ಚಿನ ಪುಸ್ತಕಗಳು ಇರಲಿವೆ. ಈ ಗ್ರಂಥಾಲಯದ ನಿರ್ವಣೆಗೆ ಒಬ್ಬ ಗ್ರಂಥಪಾಲಕರನ್ನೂ ಸಹ ನೇಮಿಸಲಾಗಿದೆ ಎಂದರು.

ಕೇವಲ ವಿದ್ಯಾರ್ಥಿಗಳು ಮಾತ್ರವೇ ಅಲ್ಲದೆ ಗ್ರಾಮಸ್ಥರೂ ಸಹ ತಮ್ಮ ಬಿಡುವಿನ ವೇಳೆಯಲ್ಲಿ ಗ್ರಂಥಾಲಯಕ್ಕೆ ಬೇಟಿ ನೀಡಿ ಪುಸ್ತಕಗಳನ್ನು ಅಧ್ಯಯನ ಮಾಡಲು ಅವಕಾಶವಿದೆ. ಹಾಗಾಗಿ ಎಲ್ಲಾ ಗ್ರಾಮಸ್ಥರು ಈ ಸೌಲಭ್ಯವನ್ನು ಪಡೆದುಕೊಳ್ಳುವಂತಾಗಬೇಕು ಎಂದು ಹೇಳಿದರು.

ಗ್ರಾಮದ ಮುಖ್ಯಸ್ಥರಾದ ಎಸ್.ಬಿ. ಮಲ್ಲೇಶಪ್ಪ ಅವರು ಪುಸ್ತಕಗಳನ್ನು ವಿತರಿಸಿ ಮಾತನಾಡಿ, ಸಿಂಗೊ0ಡಹಳ್ಳಿ ಗ್ರಾಮಕ್ಕೆ ಗ್ರಂಥಾಲಯ ಸೌಲಭ್ಯವನ್ನು ಕಲ್ಪಿಸಿಕೊಟ್ಟಿರುವುದು ಸಂತೋಷದ ವಿಚಾರವಾಗಿದೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ. ಇಂತಹ ಗ್ರಂಥಾಲಯಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ತಮ್ಮ ಜ್ಞಾನಾರ್ಜನೆಯನ್ನು ವೃದ್ದಿಸಿಕೊಳ್ಳುವುದರ ಜೊತೆಗೆ ಸಮಾಜದಲ್ಲಿ ಉನ್ನತ ಹುದ್ದೆಗಳಿಗೆ ಹೋಗುವಂತಾಗಬೇಕು ಎಂದು ತಿಳಿಸಿದರು.

ಗ್ರಾಮಪಂಚಾಯಿತಿ ಸದಸ್ಯ ಎಂ. ನಾಗೇಶ್ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಇತರೆ ಪಾಠೋಪಕರಣಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಬೆಗ್ಲಿ ಹೊಸಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪಾರ್ವತಮ್ಮ, ಸಿಂಗೊ0ಡಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ನಟರಾಜ್, ಗ್ರಂಥಪಾಲಕಿ ಕಾಮಾಕ್ಷಿ, ಸಿಂಗೊ0ಡಹಳ್ಳಿ ಗ್ರಾಮದ ಮುಖಂಡರಾದ ಎಸ್.ಬಿ.ನಾರಾಯಣಸ್ವಾಮಿ, ಡಿ.ಎಸ್.ವೆಂಕಟೇಶ್, ವರದಪ್ಪ, ನಾರಾಯಣಸ್ವಾಮಿ, ಮಾಲೂರು ಮುನಿಶ್ವಾಮಪ್ಪ, ಎಸ್.ಮಂಜುನಾಥ್, ಎಸ್.ವಿ.ಸುನೀಲ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ : ಕೋಲಾರ ತಾಲ್ಲೂಕಿನ ಸಿಂಗೊ0ಡಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಗ್ರಂಥಾಲಯ ಆರಂಭಗೊ0ಡಿತು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande