
ಬೆಂಗಳೂರು, 05 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 2026–27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಗಳು ಶಕ್ತಿ ಭವನದಲ್ಲಿ ಆರಂಭಗೊಂಡಿವೆ. ಮೊದಲ ಸಭೆಯನ್ನು ಅರಣ್ಯ ಮತ್ತು ಪರಿಸರ ಇಲಾಖೆಯೊಂದಿಗೆ ನಡೆಸಲಾಗಿದ್ದು, ರಾಜ್ಯದ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಪ್ರಮುಖ ಯೋಜನೆಗಳ ಕುರಿತು ಸಮಗ್ರ ಚರ್ಚೆ ನಡೆಯಿತು.
ಅರಣ್ಯ ಸಂರಕ್ಷಣೆ, ವನ್ಯಜೀವಿ ರಕ್ಷಣೆ, ಮಾನವ–ವನ್ಯಜೀವಿ ಸಂಘರ್ಷ ನಿವಾರಣೆ, ಹಸಿರು ಆವರಣ ವಿಸ್ತರಣೆ, ನದಿ ಹಾಗೂ ಜಲಾಶಯಗಳ ಸಂರಕ್ಷಣೆ ಮತ್ತು ಪರಿಸರ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಇಲಾಖೆಯಿಂದ ಸಮಗ್ರ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅರಣ್ಯ, ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಪರಿಸರ ಸಂರಕ್ಷಣೆ ಮತ್ತು ಹಸಿರು ಕರ್ನಾಟಕ ನಿರ್ಮಾಣದ ಗುರಿಯನ್ನು ಸಾಧಿಸಲು ಅಗತ್ಯ ಅನುದಾನ ಹಾಗೂ ದಿಟ್ಟ ಕ್ರಮಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಫಲಪ್ರದ ಚರ್ಚೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa