ಆಸ್ಟ್ರೇಲಿಯಾ ವೇಗದ ಬಾಲರ್ ಜೋಶ್ ಹ್ಯಾಜಲ್‌ವುಡ್ ಟಿ20 ವಿಶ್ವಕಪನಿಂದ  ಹೊರಗೆ
ನವದೆಹಲಿ, 06 ಫೆಬ್ರವರಿ (ಹಿ.ಸ.) : ಆ್ಯಂಕರ್ : ಆಸ್ಟ್ರೇಲಿಯಾದ ಪ್ರಮುಖ ವೇಗದ ಬೌಲರ್ ಜೋಶ್ ಹ್ಯಾಜಲ್‌ವುಡ್ ಗಾಯದ ಸಮಸ್ಯೆಗಳ ಹಿನ್ನೆಲೆಯಲ್ಲಿ ಶ್ರೀಲಂಕಾ–ಭಾರತದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರಿಂದ ಹೊರಗುಳಿದಿದ್ದಾರೆ. ಅಕಿಲೀಸ್ ಗಾಯದಿಂದ ಅವರು ಇನ್ನೂ ಸಂಪೂರ್ಣ ಚೇತರಿಸಿಕೊಳ
Josh


ನವದೆಹಲಿ, 06 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಆಸ್ಟ್ರೇಲಿಯಾದ ಪ್ರಮುಖ ವೇಗದ ಬೌಲರ್ ಜೋಶ್ ಹ್ಯಾಜಲ್‌ವುಡ್ ಗಾಯದ ಸಮಸ್ಯೆಗಳ ಹಿನ್ನೆಲೆಯಲ್ಲಿ ಶ್ರೀಲಂಕಾ–ಭಾರತದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರಿಂದ ಹೊರಗುಳಿದಿದ್ದಾರೆ.

ಅಕಿಲೀಸ್ ಗಾಯದಿಂದ ಅವರು ಇನ್ನೂ ಸಂಪೂರ್ಣ ಚೇತರಿಸಿಕೊಳ್ಳದಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಸೂಪರ್–8 ಹಂತಕ್ಕೆ ಹ್ಯಾಜಲ್‌ವುಡ್ ಲಭ್ಯರಾಗಬಹುದು ಎಂಬ ನಿರೀಕ್ಷೆಯಿದ್ದರೂ, ಗಾಯವನ್ನು ಆತುರವಾಗಿ ನಿವಾರಿಸುವುದು ಅಪಾಯಕಾರಿಯಾಗಿರುವುದರಿಂದ ಅವರನ್ನು ಹೊರಗಿಡಲಾಗಿದೆ ಎಂದು ಆಯ್ಕೆದಾರರು ತಿಳಿಸಿದ್ದಾರೆ. ಈ ಹಂತದಲ್ಲಿ ಬದಲಿ ಆಟಗಾರರನ್ನು ಘೋಷಿಸಿಲ್ಲ.

ಇದೇ ರೀತಿ ಪ್ಯಾಟ್ ಕಮ್ಮಿನ್ಸ್ ಕೂಡ ಗಾಯದಿಂದ ಟೂರ್ನಿಯಿಂದ ದೂರವಿರುವುದರಿಂದ, ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande