ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ಎಐಡಿಎಸ್ಓ ವಿರೋಧ
ವಿಜಯಪುರ, 10 ಮಾರ್ಚ್ (ಹಿ.ಸ.) ಆ್ಯಂಕರ್ : ರಾಜ್ಯ ಸರ್ಕಾರ ಜಾರಿಗೆ ತರುವುದಾಗಿ ಘೋಷಿಸಿರುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಿಂದ ಸುಮಾರು 40 ಸಾವಿರ ಸರ್ಕಾರಿ ಶಾಲೆಗಳು ಮುಚ್ಚುವ ಅಪಾಯ ಎದುರಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಉಳಿಸಿ ಜನ ಸಮಿತಿ ಹಾಗೂ ಎಐಡಿಎಸ್ಒ ವಿಜಯಪುರ ಸಂಘಟನೆಗಳು ಆತಂಕ ವ್ಯಕ್ತಪಡ
ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ಎಐಡಿಎಸ್ಓ ವಿರೋಧ


ವಿಜಯಪುರ, 10 ಮಾರ್ಚ್ (ಹಿ.ಸ.)

ಆ್ಯಂಕರ್ : ರಾಜ್ಯ ಸರ್ಕಾರ ಜಾರಿಗೆ ತರುವುದಾಗಿ ಘೋಷಿಸಿರುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಿಂದ ಸುಮಾರು 40 ಸಾವಿರ ಸರ್ಕಾರಿ ಶಾಲೆಗಳು ಮುಚ್ಚುವ ಅಪಾಯ ಎದುರಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಉಳಿಸಿ ಜನ ಸಮಿತಿ ಹಾಗೂ ಎಐಡಿಎಸ್ಒ ವಿಜಯಪುರ ಸಂಘಟನೆಗಳು ಆತಂಕ ವ್ಯಕ್ತಪಡಿಸಿವೆ.

ಈ ಕುರಿತು ವಿಜಯಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಸರ್ಕಾರದ ಈ ಯೋಜನೆ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಗೆ ದೊಡ್ಡ ಹೊಡೆತ ನೀಡಲಿದೆ ಎಂದು ಆರೋಪಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಇರುವ ಸಣ್ಣ ಸರ್ಕಾರಿ ಶಾಲೆಗಳು ಮುಚ್ಚುವ ಸಾಧ್ಯತೆ ಹೆಚ್ಚಿದ್ದು, ಇದರಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಧಕ್ಕೆಯಾಗಲಿದೆ ಎಂದು ಅವರು ಹೇಳಿದರು. ನಮ್ಮೂರ ಸರ್ಕಾರಿ ಶಾಲೆಗಳನ್ನು ಉಳಿಸುವ ಉದ್ದೇಶದಿಂದ ಶೀಘ್ರದಲ್ಲೇ ವಿಜಯಪುರದಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಘಟನೆಯವರು ತಿಳಿಸಿದರು.

ಸರ್ಕಾರವು ತಕ್ಷಣವೇ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಹಿಂತೆಗೆದುಕೊಂಡು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಜನ ಸಮಿತಿ ಹಾಗೂ ಎಐಡಿಎಸ್ಒ ವಿಜಯಪುರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande