
ನವದೆಹಲಿ, 10 ಮಾರ್ಚ್ (ಹಿ.ಸ.):
ಆ್ಯಂಕರ್:
ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಆರಂಭಿಕ ವಹಿವಾಟಿನಲ್ಲಿ ಕುಸಿತದ ಪ್ರವೃತ್ತಿ ಮುಂದುವರಿದಿದೆ. ಚಿನ್ನದ ಬೆಲೆ 10 ಗ್ರಾಂಗೆ ಸುಮಾರು ₹1,800 ರಿಂದ ₹1,970 ರವರೆಗೆ ಇಳಿಕೆಯಾಗಿದ್ದು, ಬೆಳ್ಳಿಯ ಬೆಲೆ ಪ್ರತಿ ಕಿಲೋಗ್ರಾಂಗೆ ಸುಮಾರು ₹5,000 ರಷ್ಟು ಕಡಿಮೆಯಾಗಿದೆ.
ಇತ್ತೀಚಿನ ಇಳಿಕೆಯಿಂದಾಗಿ ದೇಶದ ವಿವಿಧ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ಸುಮಾರು ₹1,61,670 ರಿಂದ ₹1,61,820 ರವರೆಗೆ ವಹಿವಾಟಾಗುತ್ತಿದೆ. ಅದೇ ವೇಳೆ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹1,48,190 ರಿಂದ ₹1,48,340 ರವರೆಗೆ ದಾಖಲಾಗಿದೆ.
ದೇಶದ ರಾಜಧಾನಿ ನವದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹1,61,820 ಆಗಿದ್ದು, 22 ಕ್ಯಾರೆಟ್ ಚಿನ್ನ ₹1,48,340 ದರದಲ್ಲಿ ಮಾರಾಟವಾಗುತ್ತಿದೆ.
ಬೆಳ್ಳಿಯ ಬೆಲೆ ದೆಹಲಿ ಮಾರುಕಟ್ಟೆಯಲ್ಲಿ ಪ್ರತಿ ಕಿಲೋಗ್ರಾಂಗೆ ₹2,79,900 ಕ್ಕೆ ಇಳಿಕೆಯಾಗಿದೆ.
ದೇಶದ ಆರ್ಥಿಕ ರಾಜಧಾನಿಯಾದ ಮುಂಬೈ ಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹1,61,670 ಮತ್ತು 22 ಕ್ಯಾರೆಟ್ ಚಿನ್ನ ₹1,48,190 ದರದಲ್ಲಿ ವಹಿವಾಟು ನಡೆಸುತ್ತಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa