ಮಹನೀಯರ ಜಯಂತಿ: ಮಾ.12ರಂದು ಪೂರ್ವಭಾವಿ ಸಭೆ
ಚಿತ್ರದುರ್ಗ, 10 ಮಾರ್ಚ್ (ಹಿ.ಸ.): ಆ್ಯಂಕರ್: ವಿವಿಧ ಮಹನೀಯರ ಜಯಂತಿಗಳ ಆಚರಣೆ ಕುರಿತು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವ ಸಂಬಂಧ ಇದೇ ಮಾರ್ಚ್ 12ರಂದು ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ. ಮಾರ್ಚ್ 23 ರಂದು ಆದ್ಯ ವಚನಕಾರ ಶ್ರೀ ದೇ
ಮಹನೀಯರ ಜಯಂತಿ: ಮಾ.12ರಂದು ಪೂರ್ವಭಾವಿ ಸಭೆ


ಚಿತ್ರದುರ್ಗ, 10 ಮಾರ್ಚ್ (ಹಿ.ಸ.):

ಆ್ಯಂಕರ್:

ವಿವಿಧ ಮಹನೀಯರ ಜಯಂತಿಗಳ ಆಚರಣೆ ಕುರಿತು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವ ಸಂಬಂಧ ಇದೇ ಮಾರ್ಚ್ 12ರಂದು ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.

ಮಾರ್ಚ್ 23 ರಂದು ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆ ಕುರಿತು ಬೆಳಿಗ್ಗೆ 11 ಗಂಟೆಗೆ, ಮಾರ್ಚ್ 28 ರಂದು ಶ್ರೀ ಅಗ್ನಿಬನ್ನಿರಾಯ ಜಯಂತಿ ಆಚರಣೆ ಕುರಿತು ಬೆಳಿಗ್ಗೆ 11.30ಕ್ಕೆ ಹಾಗೂ ಮಾರ್ಚ್ 31 ರಂದು ಭಗವಾನ್ ಮಹಾವೀರ ಜಯಂತಿ ಆಚರಣೆ ಕುರಿತು ಮಧ್ಯಾಹ್ನ 12 ಗಂಟೆಗೆ ಪೂರ್ವಭಾವಿ ಸಭೆಗಳು ಜರುಗಲಿವೆ. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯ ಅಧ್ಯಕ್ಷತೆ ವಹಿಸುವರು.

ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು, ಸಾರ್ವಜನಿಕರು ಸಭೆಗೆ ಹಾಜರಾಗಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande