ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹1.57 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ
ಬೆಂಗಳೂರು, 11 ಮಾರ್ಚ್ (ಹಿ.ಸ.): ಆ್ಯಂಕರ್: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್–2ರಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ಸಾಗಾಣಿಕೆ ಪ್ರಕರಣವನ್ನು ಪತ್ತೆಹಚ್ಚಿದ್ದಾರೆ. ಬ್ಯಾಂಕಾಕ್‌ನಿಂದ ಆಗಮಿಸುತ್ತಿದ್ದ ಪ್ರಯಾಣಿಕನ ಚೆಕ
Custom


ಬೆಂಗಳೂರು, 11 ಮಾರ್ಚ್ (ಹಿ.ಸ.):

ಆ್ಯಂಕರ್:

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್–2ರಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ಸಾಗಾಣಿಕೆ ಪ್ರಕರಣವನ್ನು ಪತ್ತೆಹಚ್ಚಿದ್ದಾರೆ. ಬ್ಯಾಂಕಾಕ್‌ನಿಂದ ಆಗಮಿಸುತ್ತಿದ್ದ ಪ್ರಯಾಣಿಕನ ಚೆಕ್–ಇನ್ ಬ್ಯಾಗೇಜ್‌ನಲ್ಲಿ ಬಚ್ಚಿಟ್ಟಿದ್ದ ₹1.57 ಕೋಟಿ ಮೌಲ್ಯದ 4.5 ಕಿಲೋಗ್ರಾಂ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಕಸ್ಟಮ್ಸ್ ಇಲಾಖೆ , ಪ್ರಯಾಣಿಕನು ನಿಷೇಧಿತ ಮಾದಕ ವಸ್ತುವನ್ನು ಸೂಟ್ಕೇಸ್‌ನೊಳಗೆ ವಿಶಿಷ್ಟ ರೀತಿಯಲ್ಲಿ ಅಡಗಿಸಿ ತರಲಾಗಿತ್ತು. ಶಂಕೆಯ ಮೇರೆಗೆ ಅಧಿಕಾರಿಗಳು ಬ್ಯಾಗೇಜ್‌ ತಪಾಸಣೆ ನಡೆಸಿದಾಗ ಈ ವಸ್ತು ಪತ್ತೆಯಾಯಿತು.

ಆರೋಪಿಯನ್ನು 1985ರ ಮದ್ಯಪಾನ ಮತ್ತು ಮಾದಕ ವಸ್ತು ನಿಷೇಧ ಕಾಯ್ದೆ (ಎನ್ ಡಿ ಪಿ ಎಸ್ ಕಾಯ್ದೆ) ಅಡಿಯಲ್ಲಿ ಬಂಧಿಸಲಾಗಿದ್ದು, ವಿಚಾರಣೆ ಮುಂದುವರಿಯುತ್ತಿದೆ.

ಅಧಿಕಾರಿಗಳು ಅಂತಾರಾಷ್ಟ್ರೀಯ ಮಾದಕ ವಸ್ತು ಸಾಗಾಣಿಕೆ ವಿರುದ್ಧದ ಕ್ರಮಗಳನ್ನು ಮತ್ತಷ್ಟು ಬಲಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande