ಛತ್ರಪತಿ ಸಂಭಾಜಿ ಮಹಾರಾಜರ ಹುತಾತ್ಮ ದಿನ: ನಿತಿನ್ ನವೀನ್ ನಮನ
ನವದೆಹಲಿ, 11 ಮಾರ್ಚ್ (ಹಿ.ಸ.): ಆ್ಯಂಕರ್:ಧರ್ಮ, ಸ್ವಾಭಿಮಾನ ಮತ್ತು ರಾಷ್ಟ್ರದ ರಕ್ಷಣೆಗಾಗಿ ಸರ್ವೋಚ್ಚ ತ್ಯಾಗ ಮಾಡಿದ ವೀರ ಯೋಧ ಛತ್ರಪತಿ ಸಂಭಾಜಿ ಮಹಾರಾಜ್ ಅವರ ಹುತಾತ್ಮ ದಿನದ ಅಂಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಗೌರವ ನಮನ ಸಲ್ಲಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇ
Sambaji


ನವದೆಹಲಿ, 11 ಮಾರ್ಚ್ (ಹಿ.ಸ.):

ಆ್ಯಂಕರ್:ಧರ್ಮ, ಸ್ವಾಭಿಮಾನ ಮತ್ತು ರಾಷ್ಟ್ರದ ರಕ್ಷಣೆಗಾಗಿ ಸರ್ವೋಚ್ಚ ತ್ಯಾಗ ಮಾಡಿದ ವೀರ ಯೋಧ ಛತ್ರಪತಿ ಸಂಭಾಜಿ ಮಹಾರಾಜ್ ಅವರ ಹುತಾತ್ಮ ದಿನದ ಅಂಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಗೌರವ ನಮನ ಸಲ್ಲಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಸಂಭಾಜಿ ಮಹಾರಾಜರು ಅದಮ್ಯ ಧೈರ್ಯ ಮತ್ತು ಅಚಲ ದೃಢಸಂಕಲ್ಪದ ಪ್ರತಿರೂಪರಾಗಿದ್ದರು. ಅನ್ಯಾಯ ಮತ್ತು ದಬ್ಬಾಳಿಕೆಯ ವಿರುದ್ಧ ಅವರು ಅಪ್ರತಿಮ ಧೈರ್ಯದಿಂದ ಹೋರಾಡಿ, ಹಿಂದೂ ಸ್ವರಾಜ್ಯ ಮತ್ತು ಸಾಂಸ್ಕೃತಿಕ ಗುರುತನ್ನು ಕಾಪಾಡುವ ಅಮರ ಇತಿಹಾಸವನ್ನು ನಿರ್ಮಿಸಿದ್ದಾರೆ ಎಂದು ಹೇಳಿದರು.

ಅವರ ತ್ಯಾಗ ಮತ್ತು ಬಲಿದಾನ ದೇಶಭಕ್ತಿ, ಧೈರ್ಯ ಹಾಗೂ ಸಮರ್ಪಣೆಯ ಶಾಶ್ವತ ಸ್ಫೂರ್ತಿಯಾಗಿದೆ. ರಾಷ್ಟ್ರದ ಹಿತಾಸಕ್ತಿಯನ್ನು ಸದಾ ಅತ್ಯುನ್ನತವಾಗಿಡುವ ಮನೋಭಾವವನ್ನು ಸಂಭಾಜಿ ಮಹಾರಾಜರ ಜೀವನ ನಮಗೆ ನೀಡುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande