ಜಮಖಂಡಿಯಲ್ಲಿ ಫರ್ನಿಚರ್ ಅಂಗಡಿಗೆ ಬೆಂಕಿ: ಲಕ್ಷಾಂತರ ರೂ. ನಷ್ಟ
ಬಾಗಲಕೋಟೆ, 12 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಹೊರ ವಲಯದಲ್ಲಿರುವ ಫರ್ನಿಚರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿ ಇದ್ದ ಸೋಫಾ, ಬೆಡ್ ಸೇರಿದಂತೆ ಅಲಂಕಾರಿಕ ವಸ್ತುಗಳು ಸುಟ್ಟು
Fire accident


ಬಾಗಲಕೋಟೆ, 12 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಹೊರ ವಲಯದಲ್ಲಿರುವ ಫರ್ನಿಚರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿ ಇದ್ದ ಸೋಫಾ, ಬೆಡ್ ಸೇರಿದಂತೆ ಅಲಂಕಾರಿಕ ವಸ್ತುಗಳು ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಹಾನಿ ಸಂಭವಿಸುವುದನ್ನು ತಪ್ಪಿಸಿದರು.

ಈ ಸಂಬಂಧ ಜಮಖಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

-------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande