ಸಮಾಜದಲ್ಲಿ ಮಹಿಳೆಯರಿಗೆ ಜವಾಬ್ದಾರಿ ಹೆಚ್ಚು – ಸುನಂದಾ ತೊಳಬಂದಿ
ವಿಜಯಪುರ, 12 ಮಾರ್ಚ್ (ಹಿ.ಸ.) ಆ್ಯಂಕರ್ : ಸಮಾಜದ ಅಂಕು-ಡೊಂಕುಗಳನ್ನು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖವಾಗಿದೆ ಎಂದು ರಾಷ್ಟ್ರೀಯ ಉಜ್ವಲಾ ಸಂಸ್ಥೆಯ ಮುಖ್ಯಸ್ಥೆ ಸುನಂದಾ ತೊಳಬಂದಿ ಹೇಳಿದರು. ವಿಜಯಪುರ ನಗರದ ಕೃಷ್ಣ–ವಾದಿರಾಜ ಮಠದಲ್ಲಿ ಅಖಿಲ ಭಾರತ ಮಧ್ವ ಮಹಾ ಮಂಡಳದ ಸಹಕಾರದೊಂದಿಗೆ
Women's day


ವಿಜಯಪುರ, 12 ಮಾರ್ಚ್ (ಹಿ.ಸ.)

ಆ್ಯಂಕರ್ : ಸಮಾಜದ ಅಂಕು-ಡೊಂಕುಗಳನ್ನು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖವಾಗಿದೆ ಎಂದು ರಾಷ್ಟ್ರೀಯ ಉಜ್ವಲಾ ಸಂಸ್ಥೆಯ ಮುಖ್ಯಸ್ಥೆ ಸುನಂದಾ ತೊಳಬಂದಿ ಹೇಳಿದರು.

ವಿಜಯಪುರ ನಗರದ ಕೃಷ್ಣ–ವಾದಿರಾಜ ಮಠದಲ್ಲಿ ಅಖಿಲ ಭಾರತ ಮಧ್ವ ಮಹಾ ಮಂಡಳದ ಸಹಕಾರದೊಂದಿಗೆ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಅಬಲೆಯರಲ್ಲ, ಸಬಲೆಯರು ಎಂಬುದನ್ನು ಹೆಮ್ಮೆಯಿಂದ ಹೇಳುವ ಕಾಲ ಬಂದಿದೆ. ದಶ ದಿಕ್ಕುಗಳಲ್ಲಿಯೂ ಮಹಿಳೆಯರ ಸಾಧನೆ ಕುರಿತು ಚರ್ಚೆ ನಡೆಯುತ್ತಿರುವುದು ಇದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿಯ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ ಅನುಭವವನ್ನು ಹಂಚಿಕೊಂಡ ಅವರು, ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಅವುಗಳ ಪ್ರಯೋಜನವನ್ನು ಪಡೆದು ಪ್ರತಿಭೆಗಳು ಹೊರಬರಬೇಕು ಎಂದು ಕರೆ ನೀಡಿದರು. ಮಹಿಳೆಯರು ಸ್ವಯಂರಕ್ಷಣೆಗೆ ಕರಾಟೆಯಂತಹ ಕೌಶಲ್ಯಗಳನ್ನು ಕಲಿಯಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಮಾತನಾಡಿದ ಚಿತ್ತಾ ಗೋಟೇಕರ, ಮಹಿಳೆಯರು ಸಮಾಜದಲ್ಲಿ ತಲೆ ಎತ್ತಿ ನಡೆಯಲು ಧೈರ್ಯದಿಂದ ಮುನ್ನಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರುಕ್ಮಿಣಿ ಗೋಪಾಲ ನಾಯಕ, ಡಾ. ಜಯಶ್ರೀ ರಾಮರಾವ ಮಂಗಲಗಿ ಅತಿಥಿಗಳಾಗಿ ಭಾಗವಹಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಅಭಿನಂದಿಸಿದರು.

ಅನಿತಾ ಪದಕಿ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರು. ಮಾಧವಿ ಪ್ರಕಾಶ ಅಕ್ಕಲಕೋಟ, ಸ್ವರ್ಣಗೌರಿ ಅಶೋಕರಾವ್, ಸುನಿತಾ ಶ್ರೀಹರಿ ಗೊಳಸಂಗಿ, ಗೀತಾ ಸೊನ್ನ, ವಾರುಣಿ ವಾಸುದೇವ್ ಆಚಾರ್ಯ, ರಾಧಾ ಕೃಷ್ಣಾಜಿ ಕುಲಕರ್ಣಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande