
ಬಾಗಲಕೋಟೆ, 13 ಮಾರ್ಚ್ (ಹಿ.ಸ.)
ಆ್ಯಂಕರ್ : ಸೈಬರ್ ಅಪರಾಧಿಗಳು ವಿವಿಧ ರೀತಿಯ ಆನ್ಲೈನ್ ವಂಚನೆಗಳ ಮೂಲಕ ನಿಮ್ಮ ವೈಯಕ್ತಿಕ ಹಾಗೂ ಹಣಕಾಸಿನ ಮಾಹಿತಿಯನ್ನು ಕಳವು ಮಾಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಬಾಗಲಕೋಟೆ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾವುದೇ ಅಪರಿಚಿತ ವ್ಯಕ್ತಿಗಳು ಅಥವಾ ಅನುಮಾನಾಸ್ಪದ ಲಿಂಕ್ಗಳು, ವೆಬ್ಸೈಟ್ಗಳ ಮೂಲಕ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳಬಾರದು. ವಿಶೇಷವಾಗಿ ಪಾಸ್ವರ್ಡ್, ಒಟಿಪಿ, ಬ್ಯಾಂಕ್ ಖಾತೆ ವಿವರಗಳು, ಆಧಾರ್ ಸಂಖ್ಯೆ ಸೇರಿದಂತೆ ಇತರ ಖಾಸಗಿ ಮಾಹಿತಿಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ಸೂಚಿಸಲಾಗಿದೆ.
ಸಾಮಾಜಿಕ ಜಾಲತಾಣಗಳು ಹಾಗೂ ಇತರ ಆನ್ಲೈನ್ ಖಾತೆಗಳನ್ನು ಬಳಸುವಾಗ ಸದಾ ಬಲವಾದ ಪಾಸ್ವರ್ಡ್ಗಳನ್ನು ಬಳಸುವುದು ಮತ್ತು ಖಾತೆಗಳನ್ನು ಸುರಕ್ಷಿತವಾಗಿಡುವುದು ಅತ್ಯಂತ ಮುಖ್ಯವಾಗಿದೆ. ಯಾವುದೇ ರೀತಿಯ ಸೈಬರ್ ವಂಚನೆ ಅಥವಾ ಆನ್ಲೈನ್ ಮೋಸ ಸಂಭವಿಸಿದರೆ ತಕ್ಷಣವೇ ಸಹಾಯವಾಣಿ ಸಂಖ್ಯೆ 1930 ಗೆ ಕರೆ ಮಾಡಬೇಕು. ಅಲ್ಲದೆ www.cybercrime.gov.in ವೆಬ್ಸೈಟ್ನಲ್ಲಿ ಕೂಡ ದೂರು ದಾಖಲಿಸಬಹುದು ಎಂದು ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande