ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಪ್ರದೇಶ ಹೊಸ ಮಾನದಂಡ ಸ್ಥಾಪಿಸಲಿದೆ: ರಾಜನಾಥ್ ಸಿಂಗ್
ಲಕ್ನೋ, 13 ಮಾರ್ಚ್ (ಹಿ.ಸ.): ಆ್ಯಂಕರ್:ಉತ್ತರ ಪ್ರದೇಶವು ವಿಶಾಲ ದೃಷ್ಟಿಕೋನದೊಂದಿಗೆ ಅಭಿವೃದ್ಧಿಯ ದಾರಿಯಲ್ಲಿ ಮುಂದುವರಿಯುತ್ತಿದ್ದು, ಮುಂಬರುವ ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಶುಕ್ರವಾರ ಲಕ್ನೋ
Rajnath singh


ಲಕ್ನೋ, 13 ಮಾರ್ಚ್ (ಹಿ.ಸ.):

ಆ್ಯಂಕರ್:ಉತ್ತರ ಪ್ರದೇಶವು ವಿಶಾಲ ದೃಷ್ಟಿಕೋನದೊಂದಿಗೆ ಅಭಿವೃದ್ಧಿಯ ದಾರಿಯಲ್ಲಿ ಮುಂದುವರಿಯುತ್ತಿದ್ದು, ಮುಂಬರುವ ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಶುಕ್ರವಾರ ಲಕ್ನೋ ನಗರದ ಗಾಲ್ಫ್ ಸಿಟಿ ಪ್ರದೇಶದಲ್ಲಿರುವ ಸಿಟಿ ಮಾಂಟೆಸ್ಸರಿ ಶಾಲೆಯ ಹೊಸ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಕಳೆದ ಕೆಲವು ವರ್ಷಗಳಲ್ಲಿ ಉತ್ತರ ಪ್ರದೇಶವು ಮೂಲಸೌಕರ್ಯ, ಹೂಡಿಕೆ, ಕೈಗಾರಿಕೆ ಮತ್ತು ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ಹೇಳಿದರು.

ಒಂದು ನಗರದ ಗುರುತು ಕೇವಲ ಅದರ ರಸ್ತೆಗಳು ಮತ್ತು ಕಟ್ಟಡಗಳಲ್ಲ; ಅದರ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಂಸ್ಥೆಗಳಲ್ಲಿಯೂ ಅದು ಪ್ರತಿಫಲಿಸುತ್ತದೆ. ಅಂತಹ ಸಂಸ್ಥೆಗಳೇ ಸಮಾಜದ ಭವಿಷ್ಯವನ್ನು ರೂಪಿಸುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಕೇವಲ ಶಾಲೆಗಳು ಮತ್ತು ಮಹಾವಿದ್ಯಾಲಯಗಳನ್ನು ತೆರೆಯುವುದಕ್ಕೆ ಮಾತ್ರ ಗಮನ ನೀಡಲಾಗುತ್ತಿಲ್ಲ. ವಿದ್ಯಾರ್ಥಿಗಳು ಓದಿನ ಜೊತೆಗೆ ಸಕಾರಾತ್ಮಕ ಕಲಿಕಾ ವಾತಾವರಣವನ್ನು ಹೊಂದುವಂತೆ ಪರಿಸರ ವ್ಯವಸ್ಥೆಯನ್ನು ರೂಪಿಸುವತ್ತ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು. ಶಾಲೆ ಕೇವಲ ಜ್ಞಾನ ನೀಡುವ ಸ್ಥಳವಲ್ಲ ಅದು ಮಾನವ ಅಭಿವೃದ್ಧಿಯ ಪ್ರಯೋಗಾಲಯವಾಗಿದೆ. ಇಲ್ಲಿ ಗಣಿತ, ವಿಜ್ಞಾನ ಅಥವಾ ಭಾಷೆಗಳ ಜೊತೆಗೆ ಜೀವನ ಮೌಲ್ಯಗಳನ್ನೂ ಕಲಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಶಿಕ್ಷಣದ ನಿಜವಾದ ಉದ್ದೇಶ ವ್ಯಕ್ತಿಯ ಜ್ಞಾನವನ್ನು ತನ್ನ ಸ್ವಂತ ಲಾಭಕ್ಕಷ್ಟೇ ಅಲ್ಲ, ಸಮಾಜದ ಪ್ರಗತಿಗೂ ಬಳಸುವಂತೆ ಮಾಡುವುದು ಎಂದು ರಾಜನಾಥ್ ಸಿಂಗ್ ಹೇಳಿದರು. ಮಕ್ಕಳು ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಾರಾದರೂ, ಅವರ ವ್ಯಕ್ತಿತ್ವದ ನಿರ್ಮಾಣದಲ್ಲಿ ಮನೆಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಶಾಲೆ ಜ್ಞಾನ ಮತ್ತು ಶಿಸ್ತು ನೀಡಿದರೆ, ಮನೆ ಜೀವನ ಅನುಭವ, ಸಂವೇದನೆ ಮತ್ತು ಮೌಲ್ಯಗಳನ್ನು ನೀಡುತ್ತದೆ ಎಂದು ಅವರು ಹೇಳಿದರು.

ಜೀವನದಲ್ಲಿ ಯಶಸ್ಸು ಎಂದರೆ ಕೇವಲ ಉತ್ತಮ ಉದ್ಯೋಗ, ಹೆಚ್ಚಿನ ಸಂಬಳ ಅಥವಾ ಪ್ರತಿಷ್ಠಿತ ಸಂಸ್ಥೆಯಲ್ಲಿ ಪ್ರವೇಶ ಪಡೆಯುವುದಲ್ಲ. ವ್ಯಕ್ತಿಗಳು ತಮ್ಮ ಜ್ಞಾನ ಮತ್ತು ಆಲೋಚನೆಗಳ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ಸಾಧ್ಯವಾಗಬೇಕು. ಆದ್ದರಿಂದ ಮಕ್ಕಳನ್ನು ಕೇವಲ ಅಂಕಗಳಿಗೆ ಮಾತ್ರವಲ್ಲ, ಜೀವನದ ಸವಾಲುಗಳನ್ನು ಎದುರಿಸಲು ಸಿದ್ಧಗೊಳಿಸುವುದು ಅಗತ್ಯ ಎಂದು ಅವರು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande