ಕಾರು ಪಲ್ಟಿ – ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರು ಗಂಭೀರ ಗಾಯ
ವಿಜಯಪುರ, 13 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಬಸವನಹಟ್ಟಿ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ಮೂಲದವರಾದ ಚಂದ್ರವ್ವ ಟಕ್ಕಣ್ಣವರ್ (70) ಹಾ
ಕಾರು ಪಲ್ಟಿ – ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರು ಗಂಭೀರ ಗಾಯ


ವಿಜಯಪುರ, 13 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಬಸವನಹಟ್ಟಿ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ.

ಬೆಳಗಾವಿ ಜಿಲ್ಲೆಯ ಕಾಗವಾಡ ಮೂಲದವರಾದ ಚಂದ್ರವ್ವ ಟಕ್ಕಣ್ಣವರ್ (70) ಹಾಗೂ ಕಾಳಪ್ಪ ಅವರಾದಿ (65) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಕಾಗವಾಡದಿಂದ ಶ್ರೀಶೈಲಕ್ಕೆ ತೆರಳುತ್ತಿದ್ದ ವೇಳೆ ಬಸವನಹಟ್ಟಿ ಕ್ರಾಸ್ ಬಳಿ ಕಾರಿನ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande