ವಡವಡಗಿ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿದ ಬಾಲ ಮೇಳ: ಪುಟಾಣಿ ಮಕ್ಕಳ ಪ್ರತಿಭೆಗೆ ವೇದಿಕೆ
ವಿಜಯಪುರ, 13 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದಲ್ಲಿ ಬಾಲ ಮೇಳ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ಶಿಶು ಅಭಿವೃದ್ಧಿ ಯೋಜನೆ ಬಸವನ ಹಾಗೂ ಅಜೀಮ್ ಪ್ರೇಮ್ ಜಿ ಇವರ ಸಹಯೋಗದಲ್ಲಿ ಈ ಬಾಲ ಮೇಳ
Children day


ವಿಜಯಪುರ, 13 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದಲ್ಲಿ ಬಾಲ ಮೇಳ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ಶಿಶು ಅಭಿವೃದ್ಧಿ ಯೋಜನೆ ಬಸವನ ಹಾಗೂ ಅಜೀಮ್ ಪ್ರೇಮ್ ಜಿ ಇವರ ಸಹಯೋಗದಲ್ಲಿ ಈ ಬಾಲ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಗ್ರಾಮದ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಚಾಲನೆ ನೀಡಿದರು. ಬಾಲ ಮೇಳದಲ್ಲಿ ಅಂಗನವಾಡಿ ಕೇಂದ್ರಗಳ ಪುಟಾಣಿ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿ ತಮ್ಮ ಮುಗ್ದತೆಯಿಂದ ಎಲ್ಲರನ್ನು ರಂಜಿಸಿದರು. ಮಕ್ಕಳ ಪ್ರತಿಭೆ ಮತ್ತು ಆತ್ಮವಿಶ್ವಾಸವನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಿದ ಈ ಕಾರ್ಯಕ್ರಮಕ್ಕೆ ಗ್ರಾಮಸ್ಥರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಮಕ್ಕಳ ಹಬ್ಬವನ್ನು ವೀಕ್ಷಿಸಲು ಗ್ರಾಮದ ಅನೇಕ ಮಹಿಳೆಯರು ಮತ್ತು ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಧೈರ್ಯ ಮತ್ತು ಆತ್ಮವಿಶ್ವಾಸವನ್ನು ಬೆಳೆಸಲು ಸಹಾಯಕವಾಗುತ್ತವೆ ಎಂದು ಆಯೋಜಕರು ತಿಳಿಸಿದರು.

ಈ ಕುರಿತು ಮಾತನಾಡಿದ ಅಂಗನವಾಡಿ ಮೇಲ್ವಿಚಾರಕಿ ಭಾರತಿ ಸಜ್ಜನ್, ಅಂಗನವಾಡಿ ಕೇಂದ್ರ ಮತ್ತು ಸಮುದಾಯದ ನಡುವೆ ಉತ್ತಮ ಸಂಬಂಧ ಬೆಳೆಸುವುದು ಈ ಬಾಲ ಮೇಳದ ಪ್ರಮುಖ ಉದ್ದೇಶವಾಗಿದೆ. ಪಾಲಕರು ಮತ್ತು ಸಮುದಾಯದ ಸದಸ್ಯರಿಗೆ ಮಕ್ಕಳ ಬೆಳವಣಿಗೆ, ಪೋಷಣೆ ಮತ್ತು ಮನೆಯಲ್ಲಿಯೇ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ವಾತಾವರಣ ಕಲ್ಪಿಸುವ ಬಗ್ಗೆ ಅರಿವು ಮೂಡಿಸುವುದೂ ಈ ಕಾರ್ಯಕ್ರಮದ ಭಾಗವಾಗಿದೆ ಎಂದು ಹೇಳಿದರು.

ಬಾಲ ಮೇಳದಲ್ಲಿ ಮಕ್ಕಳು, ಪಾಲಕರು, ಗರ್ಭಿಣಿಯರು, ಹಾಲುಣಿಸುವ ತಾಯಂದಿರು, ಆಶಾ ಕಾರ್ಯಕರ್ತೆಯರು, ಪಂಚಾಯಿತಿ ಸದಸ್ಯರು, ಶಾಲಾ ಶಿಕ್ಷಕರು, ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸರ್ಕಲ್ ಮಟ್ಟದ ಅಂಗನವಾಡಿ ಶಿಕ್ಷಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande