ಜನಗಣತಿ ಮಾಸ್ಟರ್ ಟ್ರೇನರ್ಗಳಿಂದ ಪ್ರಾತ್ಯಕ್ಷಿಕೆ
ಗದಗ, 13 ಮಾರ್ಚ್ (ಹಿ.ಸ.) ಆ್ಯಂಕರ್: ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಅವರ ನಿವಾಸದಲ್ಲಿಂದು ಜಿಲ್ಲೆಯ ಜನಗಣತಿ ಮಾಸ್ಟರ್ ಟ್ರೇನರ್ಗಳು ಭೇಟಿ ನೀಡಿ, ಜನಗಣತಿ ನಡೆಸುವ ವಿಧಾನ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ಜನಗಣತಿ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಕ್ರಮಗಳು, ಮಾಹಿತಿಯನ್ನು ಸಂಗ್ರಹಿಸುವ ವಿಧಾನ
ಫೋಟೋ


ಗದಗ, 13 ಮಾರ್ಚ್ (ಹಿ.ಸ.)

ಆ್ಯಂಕರ್: ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಅವರ ನಿವಾಸದಲ್ಲಿಂದು ಜಿಲ್ಲೆಯ ಜನಗಣತಿ ಮಾಸ್ಟರ್ ಟ್ರೇನರ್ಗಳು ಭೇಟಿ ನೀಡಿ, ಜನಗಣತಿ ನಡೆಸುವ ವಿಧಾನ ಕುರಿತು ಪ್ರಾತ್ಯಕ್ಷಿಕೆ ನೀಡಿದರು.

ಜನಗಣತಿ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಕ್ರಮಗಳು, ಮಾಹಿತಿಯನ್ನು ಸಂಗ್ರಹಿಸುವ ವಿಧಾನ ಹಾಗೂ ಗಣತಿ ವೇಳೆ ಎದುರಾಗಬಹುದಾದ ಸಮಸ್ಯೆಗಳ ಕುರಿತು ಮಾಸ್ಟರ್ ಟ್ರೇನರ್ಗಳು ವಿವರವಾಗಿ ತಿಳಿಸಿದರು.

ಜನಗಣತಿ ವೇಳೆ ಮನೆಯ ಸದಸ್ಯರ ಸಂಖ್ಯೆ, ವಿವಾಹಿತರ ವಿವರ, ಗ್ಯಾಸ್ ಸಂಪರ್ಕ, ಟಿವಿ ಸಂಪರ್ಕ ಸೇರಿದಂತೆ ಹಲವು ಮೂಲಭೂತ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತದೆ. ಈ ಮಾಹಿತಿಯನ್ನು ಸಾರ್ವಜನಿಕರು ಗಣತಿದಾರರಿಗೆ ಸರಿಯಾಗಿ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಈ ಬಾರಿ ಜನಗಣತಿ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಆ್ಯಪ್ ಮೂಲಕ ನಡೆಯಲಿದ್ದು, ಅದಕ್ಕಾಗಿ ಜಿಲ್ಲೆಯಾದ್ಯಂತ ಅಧಿಕಾರಿಗಳ ತಂಡಗಳನ್ನು ರಚಿಸಿ ತರಬೇತಿ ಪ್ರಕ್ರಿಯೆಗಳು ವೇಗವಾಗಿ ನಡೆಯುತ್ತಿವೆ ಎಂದು ಹೇಳಿದರು.

ಜನಗಣತಿ ಕಾರ್ಯವು ಎರಡು ಹಂತಗಳಲ್ಲಿ ನಡೆಯಲಿದೆ. ಇದೇ ವೇಳೆ ಸಾರ್ವಜನಿಕರಿಗೆ ಸ್ವಯಂವಾಗಿ ತಮ್ಮ ಮಾಹಿತಿಯನ್ನು ಪೋರ್ಟಲ್ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದ್ದು, ಏಪ್ರಿಲ್ 1ರಿಂದ ಏಪ್ರಿಲ್ 15ರವರೆಗೆ ಈ ಸೌಲಭ್ಯ ಲಭ್ಯವಿರುತ್ತದೆ. ಏಪ್ರಿಲ್ 16ರಿಂದ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ದಾಖಲಾದ ಮಾಹಿತಿಯನ್ನು ಪರಿಶೀಲಿಸಿ, ಉಳಿದವರ ಮಾಹಿತಿಯನ್ನು ಆ್ಯಪ್ ಮೂಲಕ ಸಂಗ್ರಹಿಸಲಿದ್ದಾರೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ಸೇರಿದಂತೆ ಜನಗಣತಿ ಮಾಸ್ಟರ್ ಟ್ರೇನರ್ಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande