
ಬಾಗಲಕೋಟೆ, 13 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ನಗರದ ಚಿತ್ರಮಂದಿರಗಳಲ್ಲಿ ಬಿಜೆಪಿ ಪಕ್ಷದ ವತಿಯಿಂದ ದಿ ಕೇರಳಾ ಸ್ಟೋರಿ ಕಥಾಹಂದರವನ್ನು ಆಧರಿಸಿದ ‘ಕೇರಳ ಸ್ಟೋರಿ-2’ ಸಿನಿಮಾದ ಉಚಿತ ಪ್ರದರ್ಶನವನ್ನು ಆಯೋಜಿಸಲಾಗಿತ್ತು.
ಬಾಗಲಕೋಟೆ ನಗರದಲ್ಲಿ ನಡೆದ ಚಿತ್ರ ಪ್ರದರ್ಶನದಲ್ಲಿ ಪಕ್ಷದ ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಚಿತ್ರ ವೀಕ್ಷಿಸಿದರು.
ಕಾರ್ಯಕ್ರಮವನ್ನು ಬಿಜೆಪಿ ಸ್ಥಳೀಯ ಘಟಕದ ನೇತೃತ್ವದಲ್ಲಿ ಆಯೋಜಿಸಲಾಗಿದ್ದು, ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಸಿನಿಮಾವನ್ನು ಉಚಿತವಾಗಿ ಪ್ರದರ್ಶಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಚಿತ್ರದ ವಿಷಯ ವಸ್ತು ಯುವ ಜನತೆಗೆ ಎಚ್ಚರಿಕೆ ನೀಡುವಂತಿದ್ದು, ಸಮಾಜದಲ್ಲಿ ನಡೆಯುತ್ತಿರುವ ಕೆಲವು ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ಪ್ರಯತ್ನವಾಗಿದೆ ಎಂದು ಬಿಜೆಪಿ ಮುಖಂಡರು ಅಭಿಪ್ರಾಯಪಟ್ಟರು.
ಪ್ರದರ್ಶನದ ವೇಳೆ ಬಿಜೆಪಿ ಮುಖಂಡರು ಮಾತನಾಡಿ, ಯುವಕರು ಹಾಗೂ ಪೋಷಕರು ಸಮಾಜದಲ್ಲಿ ನಡೆಯುವ ಘಟನೆಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು.
ಇಂತಹ ಚಿತ್ರಗಳು ಸಮಾಜದಲ್ಲಿ ಚರ್ಚೆ ಮತ್ತು ಜಾಗೃತಿಗೆ ಕಾರಣವಾಗುತ್ತವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಪದಾಧಿಕಾರಿಗಳು, ಮಹಿಳಾ ಮತ್ತು ಯುವ ಮೋರ್ಚಾ ಕಾರ್ಯಕರ್ತರು ಸೇರಿದಂತೆ ಅನೇಕರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande